newsics.com
ನವದೆಹಲಿ: ಕೊರೋನಾ ಸೋಂಕು ಎರಡನೇ ಬಾರಿಗೆ ಕರ್ನಾಟಕದ ಬೆಂಗಳೂರು ಮತ್ತು ಅಸ್ಸಾಂ ಸೇರಿದಂತೆ ದೇಶದ ಹಲವೆಡೆ
ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.
ಭಾನುವಾರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸಂಬಂಧ ಗಂಭೀರವಾದ ತನಿಖೆ ನಡೆಯುವ ಅಗತ್ಯವಿದೆ. ಈ ಮೂಲಕ ಮರು ಸೋಂಕಿನ ಪ್ರಕರಣಕ್ಕೆ ಉತ್ತರ ಕಂಡುಕೊಳ್ಳಬೇಕಾಗಿದೆ. ಈ ಕಾರಣಕ್ಕಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನೇತೃತ್ವದಲ್ಲಿ ತಜ್ಞರೊಂದಿಗೆ ಸಂಪರ್ಕದಲ್ಲಿರುವುದಾಗಿ ಅವರು ತಿಳಿಸಿದರು.
ಬೆಂಗಳೂರಿನಲ್ಲಿ 4217, ರಾಜ್ಯದಲ್ಲಿ 9,543 ಮಂದಿಗೆ ಕೊರೋನಾ, 79 ಜನ ಬಲಿ
ಬೆಂಗಳೂರಿನಲ್ಲಿ ಕೊರೋನಾ ಮರು ಸೋಂಕು ಪ್ರಮಾಣ ಹೆಚ್ಚಾಗುತ್ತಿದೆ. ಅದೇ ರೀತಿ ಅಸ್ಸಾಂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಈ ರೀತಿಯ ಮರು ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಎಡೆಮಾಡಿದೆ, ಅಸ್ಸಾಂನ ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇನಾನಿ 12 ಕ್ಕೂ ಹೆಚ್ಚು ವೈದ್ಯರಲ್ಲಿ ಎರಡನೇ ಬಾರಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಮರು ಸೋಂಕಿನ ಪ್ರಕರಣಗಳು ಬೆಂಗಳೂರು ಮತ್ತು ದೇಶದ ವಿವಿಧ ಭಾಗಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ಜಗತ್ತಿನ ಹಲವು ದೇಶಗಳಲ್ಲಿ ಎರಡನೇ ಬಾರಿಗೆ ಕಾಣಿಸಿಕೊಳ್ಳುತ್ತಿದೆ. ಇದು ಆತಂಕ ಹೆಚ್ಚಿಸುತ್ತಿದ್ದು, ತಜ್ಞರು ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸುವ ಅಗತ್ಯ ಮತ್ತು ಅನಿವಾರ್ಯತೆ ಇದೆ ಎಂದು ಹರ್ಷವರ್ಧನ್ ಹೇಳಿದ್ದಾರೆ.
ಈಗ ದೇಶದಲ್ಲಿ 59.92 ಲಕ್ಷ ಪ್ರಕರಣಗಳು ದಾಖಲಾಗಿವೆ. 49 ಲಕ್ಷ ಮಂದಿ ಇದುವರೆಗೂ ಚೇತರಿಸಿಕೊಂಡಿದ್ದು, 94 ಸಾವಿರ ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ನಾಳೆಯೇ ಕರ್ನಾಟಕ ಬಂದ್; ಆಟೋ, ಟ್ಯಾಕ್ಸಿ ಇಲ್ಲ, ಬಸ್ ಓಡೋದೂ ಡೌಟ್
ವಿವಾದಿತ 3 ಕೃಷಿ ವಿಧೇಯಕಗಳಿಗೆ ರಾಷ್ಟ್ರಪತಿ ಕೋವಿಂದ್ ಅಂಕಿತ