Saturday, November 26, 2022

ಕೊರೋನಾ ಎಫೆಕ್ಟ್: ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ವರ್ಗಾವಣೆ

Follow Us

newsics.com

ಪುದುಚೇರಿ: ಕೊರೋನಾ ಎರಡನೆ ಅಲೆ ಶೈಕ್ಷಣಿಕ ರಂಗದ ಮೇಲೆ ತೀವ್ರ ಪರಿಣಾಮ ಬೀರಿದೆ. ಹೆಚ್ಚು ಕಡಿಮೆ ಕಳೆದ ಒಂದೂವರೆ ವರ್ಷದಿಂದ ದೇಶಾದ್ಯಂತ  ನೇರ ಶಿಕ್ಷಣ ವ್ಯವಸ್ಥೆ  ಸ್ಥಗಿತಗೊಂಡಿದೆ. ಆನ್ ಲೈನ್ ಶಿಕ್ಷಣ ವ್ಯವಸ್ಥೆ ಪರಿಚಯಿಸಲಾಗಿದೆ.

ಇದರ ಜತೆಗೆ ಪೋಷಕರ ಆದಾಯ ಕೊರತೆ ಮಕ್ಕಳ ಶಿಕ್ಷಣ ಸ್ವರೂಪದ ಮೇಲೆ ಪರಿಣಾಮ ಬೀರಿದೆ. ದುಬಾರಿ ಶುಲ್ಕ ಕಟ್ಟಲು ವಿಫಲಪಾಗಿರುವ ಪೋಷಕರು ಪುದುಚೇರಿಯಲ್ಲಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳ ಬದಲಾಗಿ ಸರ್ಕಾರಿ ಶಾಲೆಗಳಲ್ಲಿ ಸೇರಿಸುತ್ತಿದ್ದಾರೆ.

ಮಕ್ಕಳ ವರ್ಗಾವಣೆ ಪತ್ರ ಪಡೆದುಕೊಂಡು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ ಎಂದು ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವರಾಗಿರುವ ಕೆ ಎಲ್ ಲಕ್ಷ್ಮೀ ನಾರಾಯಣ್ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನೀಡುತ್ತಿರುವ ಮಧ್ಯಾಹ್ನದ ಊಟ, ಹಾಗೂ ಇನ್ನಿತರ ಪ್ರೋತ್ಸಾಹ ಕ್ರಮಗಳು ಮಕ್ಕಳ ಸೇರ್ಪಡೆ ಹೆಚ್ಚಿಸಲು ಕಾರಣವಾಗಿವೆ ಎನ್ನುತ್ತಾರೆ ಶಿಕ್ಷಣ ತಜ್ಞರು.

ಇದು ಕೇವಲ ಪುದುಚೇರಿ ಸಮಸ್ಯೆ ಯಲ್ಲ. ದೇಶದ ಎಲ್ಲೆಡೆ ಇದೇ ದೃಶ್ಯ ಸಾಮಾನ್ಯವಾಗಿದೆ.

 

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!