Tuesday, April 13, 2021

ದೆಹಲಿಯಲ್ಲಿ ಕೊರೋನಾ ರೋಗಿಗಳ ಪರಿಸ್ಥಿತಿ : ಸುಪ್ರೀಂ ಛೀಮಾರಿ

ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ನಿರ್ವಹಣೆ ಕುರಿತಂತೆ ಸುಪ್ರೀಂ ಕೋರ್ಟ್ ತೀವ್ರ ಅತೃಪ್ತಿ ವ್ಯಕ್ತಪಡಿಸಿದೆ. ಈ  ಕುರಿತು ಸ್ವಯಂ ಪ್ರೇರಿತವಾಗಿ  ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ತ್ರಿ ಸದಸ್ಯ ನ್ಯಾಯಪೀಠ ಅತ್ಯಂತ ಕಟು ಶಬ್ದಗಳಲ್ಲಿ ರಾಜ್ಯ ಸರ್ಕಾರದ ಕಾರ್ಯ ವೈಖರಿಯನ್ನು  ಪ್ರಶ್ನಿಸಿದೆ. ಆಸ್ಪತ್ರೆಗಳಲ್ಲಿ ಕೊರೋನಾ ಶಂಕಿತ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ, ಕೊರೋನಾದಿಂದ ಮೃತಪಟ್ಟರಂತೂ  ಪರಿಸ್ಥಿತಿ ಹೇಳತೀರದು. ಸಂಬಂಧಿಕರಿಗೆ ಮಾಹಿತಿ ನೀಡದೆ ಮೃತದೇಹಗಳ ಅಂತ್ಯ ಸಂಸ್ಕಾರ ನಡೆಸಲಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಎಲ್ಲರೂ ಬೆಡ್ ಬಿಟ್ಟು ಆಸ್ಪತ್ರೆಯಿಂದ ತೆರಳಲಿದ್ದಾರೆ ಎಂದು ನ್ಯಾಯಪೀಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಕೂಡ ಜಾರಿ ಮಾಡಿದೆ. ಈ ಎಲ್ಲ ಸಮಸ್ಯೆಗಳಿಗೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!