Tuesday, April 13, 2021

ವಿಮಾನದಲ್ಲಿ ಕೇರಳಕ್ಕೆ ಬಂದ ಆರು ಮಂದಿಯಲ್ಲಿ ಕೊರೋನಾ ರೋಗ ಲಕ್ಷಣ

ತಿರುವನಂತಪುರಂ: ವಂದೇ ಭಾರತ್ ಕಾರ್ಯಾಚರಣೆಯಲ್ಲಿ ಕೇರಳಕ್ಕೆ ಆಗಮಿಸಿದ ಆರು ಮಂದಿಯಲ್ಲಿ ಕೊರೋನಾ ರೋಗದ ಲಕ್ಷಣ ಕಂಡು ಬಂದಿದೆ. ಬೆಹರಿನ್ ನಿಂದ ಕರಿಪುರಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಾಲ್ಕು ಮಂದಿಯಲ್ಲಿ ಕೊರೋನಾ ರೋಗದ ಲಕ್ಷಣ ಕಂಡು ಬಂದಿದೆ. ಅದೇ ರೀತಿ ದುಬೈನಿಂದ ಕೊಚ್ಚಿಗೆ ಬಂದಿಳಿದ ವಿಮಾನದಲ್ಲಿದ್ದ ಇಬ್ಬರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದೆ. ಇವರನ್ನು ಕಮಲಶ್ಯೇರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳಕ್ಕೆ ಇದೀಗ ಹೆಚ್ಚಿನ ಸಂಖ್ಯೆಯಲ್ಲಿ ಜನರು ಹಿಂತಿರುಗುತ್ತಿದ್ದು  ಇವರನ್ನು ಸಮಗ್ರ ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಲಾಗುತ್ತಿದೆ. ಸೋಮವಾರ ಕೇರಳದಲ್ಲಿ ಹೊಸದಾಗಿ ಏಳು ಕೊರೋನಾ ಪ್ರಕರಣ ವರದಿಯಾಗಿತ್ತು. ಇವರಲ್ಲಿ ಹೆಚ್ಚಿನವರು ಇತರ ರಾಜ್ಯಗಳಿಂದ ಕೇರಳಕ್ಕೆ ಹಿಂತಿರುಗಿದವರಾಗಿದ್ದರು. ಕಾಸರಗೋಡಿನಲ್ಲಿ ಕೊರೋನಾ ದೃಢಪಟ್ಟ ನಾಲ್ಕು ಮಂದಿ ಮುಂಬೈನಿಂದ  ಬಂದವರಾಗಿದ್ದರು.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!