Monday, April 12, 2021

ಕೇರಳಕ್ಕೆ ಬಂದ ರೈಲ್ಲಿನ ಆರು ಪ್ರಯಾಣಿಕರಲ್ಲಿ ಕೊರೋನಾ ಲಕ್ಷಣ

ತಿರುವನಂತಪುರಂ: ದೆಹಲಿಯಿಂದ ಕೇರಳಕ್ಕೆ ಬಂದ ರೈಲ್ಲಿನ ಆರು ಪ್ರಯಾಣಿಕರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದೆ. ಕೋಝಿಕೋಡ್ ರೈಲು ನಿಲ್ದಾಣದಲ್ಲಿ ಬಂದಿಳಿದ  ಪ್ರಯಾಣಿಕರಲ್ಲಿ ರೋಗ ಲಕ್ಷಣ ಪತ್ತೆಯಾಗಿದೆ. ಇವರನ್ನು  ಸ್ಥಳೀಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿದೆ. ದೆಹಲಿಯಿಂದ ಕೇರಳಕ್ಕೆ ಬಂದ ರೈಲ್ಲಿಗೆ ಕೇರಳದಲ್ಲಿ ಕೇವಲ ಮೂರು ನಿಲುಗಡೆ ಮಾತ್ರ ನೀಡಲಾಗಿತ್ತು. ಇದೀಗ ರೈಲು ತಿರುವನಂತಪುರ ತಲುಪಿದ್ದು, ಅಲ್ಲಿ ಕೂಡ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆಗೆ ಗುರಿಪಡಿಸಲಾಗುತ್ತಿದೆ. ಈ ಮಧ್ಯೆ ರಾಜ್ಯ ಸರ್ಕಾರ ರಾಜಕೀಯ ದ್ವೇಷ ದಿಂದ ಕಾಂಗ್ರೆಸ್ ನಾಯಕರನ್ನು ಕ್ವಾರಂಟೈನ್ ಮಾಡುತ್ತಿದೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಕಾಂಗ್ರೆಸ್ ನಾಯಕರು ಈ ಆರೋಪ ಮಾಡಿದ್ದಾರೆ. ಇದರ ವಿರುದ್ದ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಎಚ್ಚರಿಕೆ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!