Monday, April 12, 2021

ರಕ್ಷಣಾ ಕಾರ್ಯದರ್ಶಿಯಲ್ಲಿ ಕೊರೋನಾ ಸೋಂಕು ಪತ್ತೆ: ಅಧಿಕಾರಿಗಳಲ್ಲಿ ಆತಂಕ

ನವದೆಹಲಿ: ರಕ್ಷಣಾ ಕಾರ್ಯದರ್ಶಿ ಅಜಯ ಕುಮಾರ್ ಅವರಲ್ಲಿ ಕೊರೋನಾ ಸೋಂಕಿನ ಲಕ್ಷಣ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ರಕ್ಷಣಾ ಕಾರ್ಯದರ್ಶಿ ಮಹತ್ವದ ಹುದ್ದೆಯಾಗಿದ್ದು, ರೈಸಿನಾ ಹಿಲ್ ನ ಸೌತ್  ಬ್ಲಾಕ್ ನಲ್ಲಿರುವ ಕಚೇರಿಯಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್  ಮತ್ತು ಮೂರು ಪಡೆಗಳ ಮುಖ್ಯಸ್ಥರ ಜತೆಗಿನ ಭೇಟಿ ಸಾಮಾನ್ಯ ದಿನಚರಿಯಾಗಿತ್ತು. ಇದೀಗ ಕಚೇರಿಯಲ್ಲಿ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದ್ದು 35 ಸಿಬ್ಬಂದಿಯನ್ನು ಸಮಗ್ರ ವೈದ್ಯಕೀಯ ತಪಾಸಣೆಗೆ ಗುರಿಪಡಿಸಲು ನಿರ್ಧರಿಸಲಾಗಿದೆ. ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ತಮ್ಮ ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ ಅಧಿಕೃತ ಪ್ರಕಟಣೆ ಹೊರ ಬಂದಿಲ್ಲ. ಈ ಹಿಂದೆ ರಾಷ್ಟ್ರಪತಿ ಭವನದ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು. ಬಳಿಕ ಅಲ್ಲಿದ್ದ 125 ಕುಟುಂಬಗಳನ್ನು ಕ್ವಾರಂಟೈನ್ ಗೆ ಗುರಿಪಡಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!