Tuesday, April 13, 2021

ಕಾಸರಗೋಡಿನಲ್ಲಿ ಮತ್ತೆ ಕೊರೋನಾ ಆತಂಕ

ಕಾಸರಗೋಡು: ಕೊರೋನಾ ಮುಕ್ತ ಜಿಲ್ಲೆ ಎಂಬ ಘೋಷಣೆ ಬೆನ್ನ ಹಿಂದೆಯೇ ಹೊಸದಾಗಿ 10 ಪ್ರಕರಣ ಕಾಸರಗೋಡಿನಲ್ಲಿ ವರದಿಯಾಗಿದೆ. ಇದು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ.  ಹೊಸದುರ್ಗದಲ್ಲಿರುವ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಯೊಬ್ಬರನ್ನು ಕ್ವಾರಂಟೈನ್ ಗೆ ಗುರಿಪಡಿಸಲಾಗಿದೆ. ಅದೇ ಆಸ್ಪತ್ರೆಯ ಇಬ್ಬರು ವೈದ್ಯರ ಮೇಲೆ ನಿಗಾ ವಹಿಸಲಾಗಿದೆ. ಕಾಸರಗೋಡಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಹಿಂತಿರುಗುತ್ತಿದ್ದಾರೆ. ಇದರಿಂದ ರೋಗ ಹರಡುತ್ತಿದೆ ಎಂದು ವರದಿಯಾಗಿದೆ. ಇದೇ ವೇಳೆ ಗಡಿ ಪ್ರದೇಶಗಳಲ್ಲಿ ಜನರ ಚಟುವಟಿಕೆ ನಿಯಂತ್ರಿಸಲು ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕರ್ನಾಟಕದಿಂದ ಕೇರಳಕ್ಕೆ ಒಳದಾರಿಯಲ್ಲಿ ಬರುವವರನ್ನು ಪತ್ತೆ ಹಚ್ಚಲು ವಿಶೇಷ ದಳ ರಚಿಸಲಾಗಿದೆ. ಇದೇ ವೇಳೆ ಜಿಲ್ಲೆಯಲ್ಲಿ ಹೊಸ ಕೊರೋನಾ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ನಿರ್ಬಂಧ ಜಾರಿಗೆ ಮತ್ತೆ ಚಿಂತನೆ ನಡೆದಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!