Thursday, December 9, 2021

ಕೊರೋನಾ; ಈ ಬಾರಿಯ ಅಮರನಾಥ ಯಾತ್ರೆ ರದ್ದು

Follow Us

ಜಮ್ಮು: ಕೊರೋನಾ ಅಟ್ಟಹಾಸ ಹಿನ್ನೆಲೆಯಲ್ಲಿ ಈ ಬಾರಿಯ ಅಮರನಾಥ ಯಾತ್ರೆ ರದ್ದಾಗಿದೆ.
ಅಮರನಾಥ್ ಯಾತ್ರೆಗೆ ತೆರಳುವ ಮಾರ್ಗದಲ್ಲೇ ಕೊರೋನಾ ಸೋಂಕಿನ 77 ರೆಡ್ ಝೋನ್ ಪ್ರದೇಶಗಳು ಬರುವುದರಿಂದ, ಯಾತ್ರಾರ್ಥಿಗಳಿಗೆ ವೈದ್ಯಕೀಯ ಸೇವೆ ಸೇರಿದಂತೆ ಇತರೆ ಸೇವೆ ಒದಗಿಸಲು ಕಷ್ಟವಾಗುವ ಕಾರಣ 2020ರ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ಅಮರನಾಥ ಯಾತ್ರೆಯ ಬೋರ್ಡ್ ನ ಅಧ್ಯಕ್ಷ ಲೆಫ್ಟಿನೆಂಟ್ ಗೌರ್ವನರ್ ಗಿರೀಶ್ ಚಂದ್ರ ಮುರ್ಮೋ ತಿಳಿಸಿದ್ದಾರೆ.
ಜಮ್ಮುವಿನ ರಾಜ್ ಭವನದಲ್ಲಿ ಗಿರೀಶ್ ಚಂದ್ರ ಮುರ್ಮೋ ಅವರ ನೇತೃತ್ವದಲ್ಲಿ ನಡೆದ 38ನೇ ಬೋರ್ಡ್ ಮೀಟಿಂಗ್ ನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೊರೋನಾ ವೈರಸ್ ಸೋಂಕಿನ ಸಂಖ್ಯೆ ಕೂಡ ಶೀತಪ್ರದೇಶದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ವೈದ್ಯಕೀಯ ಸೇವೆ, ಮೆಡಿಸಿನ್ ಸೌಲಭ್ಯ ವ್ಯವಸ್ಥೆಯನ್ನು ಕೊರೋನಾ ನಿಯಂತ್ರಣದ ಸಂದರ್ಭದಲ್ಲಿ ಒದಗಿಸೋದು ಕಷ್ಟ ಆಗುತ್ತದೆ. ಈ ಬಾರಿ ಹಿಮ ಕೂಡ ಹೆಚ್ಚಾಗಿ ಸುರಿಯುತ್ತಿರುವುದರಿಂದ ಅಮರನಾಥ ಯಾತ್ರೆ ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗಿರೀಶ್ ಚಂದ್ರ ಮುರ್ಮೋ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!