Wednesday, July 6, 2022

ಅರ್ಜುನ್ ಸರ್ಜಾ ಪುತ್ರಿಗೆ ಕೊರೋನಾ

Follow Us

ಚೆನೈ: ಚಿರಂಜೀವಿ ಸರ್ಜಾ ನಿಧನ, ಚಿರು ಸರ್ಜಾಗೆ ಕೊರೋನಾ ಸೋಂಕು ಹೀಗೆ ಸಾಲು ಸಾಲು ಸಂಕಷ್ಟದಿಂದ ಕಂಗೆಟ್ಟ ಸರ್ಜಾ ಕುಟುಂಬಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಅರ್ಜುನ್ ಸರ್ಜಾ ಪ್ರೀತಿಯ ಪುತ್ರಿ ಐಶ್ವರ್ಯಾ ಸರ್ಜಾ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಈ ಬಗ್ಗೆ ಸ್ವತಃ ಐಶ್ವರ್ಯಾ ಸರ್ಜಾ ತಮ್ಮ ಟ್ವಿಟರ್ ಅಕೌಂಟ್ ನಲ್ಲಿ ಪೋಸ್ಟ್ ಹಾಕಿದ್ದು ನಾನು ಕೊರೋನಾ ಪಾಸಿಟಿವ್ ಆಗಿದ್ದು ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ವೈದ್ಯರ ತಂಡ ನನ್ನ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ.
ಕಳೆದ ಕೆಲದಿನಗಳಿಂದ ನನ್ನ ಒಡನಾಟದಲ್ಲಿದ್ದವರು ಒಮ್ಮೆ ಕೊರೋನಾ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಚಿರು ಸರ್ಜಾ ಸಹೋದರ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.
ಐಶ್ವರ್ಯಾ ಸರ್ಜಾ ಈಗ ಅವರ ಚೆನೈ ನಿವಾಸದಲ್ಲಿದ್ದು ಮನೆಯಲ್ಲಿ ಅರ್ಜುನ್ ಸರ್ಜಾ ಹಾಗೂ ಅವರ ಪತ್ನಿ ಕೂಡ ಕೊರೋನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದು ಅವರ ಟೆಸ್ಟ್ ರಿಸಲ್ಟ್ ನೆಗೆಟಿವ್ ಬಂದಿದೆ.

ಮುಂದಿನ ತಿಂಗಳು ರಷ್ಯಾ ಕೊರೋನಾ ಲಸಿಕೆ ಬಿಡುಗಡೆ ಸಂಭವ

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ...

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ...
- Advertisement -
error: Content is protected !!