Monday, January 25, 2021

ಹೋರಾಟಗಾರ ವರವರರಾವ್’ಗೆ ಕೊರೋನಾ

ಮುಂಬೈ: ಜೈಲಿನಲ್ಲಿರುವ ಹೋರಾಟಗಾರ ಮತ್ತು ಕ್ರಾಂತಿಕಾರಿ ವರವರರಾವ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಆದರೆ ಅವರಿಗೆ ಕೊರೋನಾ ಸೋಂಕಿನ ಯಾವುದೇ ಲಕ್ಷಣ ಕಂಡುಬಂದಿಲ್ಲ.
ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆದರೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಅವರ ಕುಟುಂಬದವರು ಆತಂಕದಲ್ಲಿದ್ದಾರೆ.
ಸದ್ಯ ವರವರ ರಾವ್ ಅವರು ಕೋವಿಡ್ ಅಲ್ಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಅವರನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಜೆಜೆ ಆಸ್ಪತ್ರೆಯ ಡೀನ್ ಡಾ. ರಂಜಿತ್ ಮಾಂಕೇಶ್ವರ್ ತಿಳಿಸಿದ್ದಾರೆ.
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 80 ವರ್ಷದ ವರವರ ರಾವ್ ಎರಡು ವರ್ಷಗಳಿಂದ ನವಿ ಮುಂಬೈನ ತಾಲೋಜ ಜೈಲಿನಲ್ಲಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರಿಗೆ ಹೆಚ್ಚಿನ ವೈದ್ಯಕೀಯ ಸೌಲಭ್ಯ ಒದಗಿಸಬೇಕೆಂದು ಜೈಲು ಅಧಿಕಾರಿಗಳಿಗೆ ಕುಟುಂಬದವರು ಒತ್ತಾಯಿಸಿದ್ದು, ಆಸ್ಪತ್ರೆಗೆ ದಾಖಲಿಸಿದ ನಂತರದಲ್ಲಿ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಗೊತ್ತಾಗಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಜೈಲುಶಿಕ್ಷೆ ಪಡೆದ, ಕೊರೋನಾ ಸೋಂಕಿತ ಅಧಿಕಾರಿ ಆತ್ಮಹತ್ಯೆ

newsics.com ಜೈಪುರ: ಕಳೆದ ವಾರ ಜೈಪುರ ಕೋರ್ಟ್ ನಿಂದ 5 ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಕಂದಾಯ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 2016ರಲ್ಲಿ 1...

ಕರ್ನಾಟಕದ ಇಬ್ಬರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ

newsics.com ಬೆಂಗಳೂರು: ಗಣರಾಜ್ಯೋತ್ಸವ ಸಮಯದಲ್ಲಿ ನೀಡುವ 2021ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಕರ್ನಾಟಕದ ಇಬ್ಬರು ಮಕ್ಕಳಿಗೆ ಭಾಜನರಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 32 ಮಕ್ಕಳಿಗೆ ಈ ಪ್ರಶಸ್ತಿ ನೀಡಲಾಗಿದ್ದು...

ಎಫ್’ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪ್ರಮುಖ ಆರೋಪಿಗಳ ಬಂಧನ

newsics.com ಬೆಂಗಳೂರು: ಎಫ್'ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರಿಬ್ಬರೂ ಕೆಪಿಎಸ್ ಸಿ ಆಯೋಗದಲ್ಲಿಯೇ ಕೆಲಸ ಮಾಡುತ್ತಿದ್ದರು‌ ಎನ್ನಲಾಗಿದೆ. ಹೀಗಾಗಿ ಪ್ರಶ್ನೆ ಪತ್ರಿಕೆ ಆಯೋಗದಿಂದಲೇ...
- Advertisement -
error: Content is protected !!