Monday, April 12, 2021

ಕೊರೋನಾ ತಡೆ: ಮಾನವನ ಮೇಲೆ ಎರಡನೆ ಲಸಿಕೆ ಪ್ರಯೋಗಕ್ಕೆ ಅನುಮೋದನೆ

ನವದೆಹಲಿ: ತಲ್ಲಣ ಮೂಡಿಸಿರುವ ಮಾರಕ ಕೊರೋನಾ ತ಼ಡೆಗಟ್ಟುವ ಸಂಬಂಧ ಲಸಿಕೆ ಅಭಿವೃದ್ಧಿ ಪ್ರಗತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಅಹಮ್ಮದಾಬಾದ್ ಮೂಲದ ಜೈ಼ಡುಸ್ ಕ್ಯಾಡಿಲಾ ಹೆಲ್ತ್  ಕೇರ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ಲಸಿಕೆಯನ್ನು ಮಾನವನ ಮೇಲೆ  ಪ್ರಯೋಗಕ್ಕೆ ಅನುಮೋದನೆ ನೀಡಲಾಗಿದೆ. ಭಾರತದ ಔಷಧ ನಿಯಂತ್ರಣ ಮಹಾ ನಿರ್ದೇಶಕರು ಈ ಅನುಮತಿ ನೀಡಿದ್ದಾರೆ. ಪ್ರಾಣಿಗಳ ಮೇಲಿನ ಪರೀಕ್ಷಾ ಫಲಿತಾಂಶ ಸಕಾರಾತ್ಮಕವಾಗಿರುವ ಹಿನ್ನೆಲೆಯಲ್ಲಿ  ಈ ಅನುಮತಿ ದೊರೆತಿದೆ. ಎರಡು ದಿನಗಳ ಹಿಂದೆ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಲಸಿಕೆ ಕೊವ್ಯಾಕ್ಸಿನ್ ಹೊಸ ಭರವಸೆ ಮೂಡಿಸಿತ್ತು. ಇದು ಆಗಸ್ಟ್ 15ರಂದು ಅಧಿಕೃತವಾಗಿ ಬಿಡುಗಡೆಯಾಗುವ ಸಾಧ್ಯತೆಯಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!