Monday, November 29, 2021

ಕೊರೋನಾ ವೈರಸ್ 27 ಅಡಿ ದೂರದವರೆಗೂ ಹರಡಬಲ್ಲದು!

Follow Us

ನವದೆಹಲಿ: ಕೊರೋನಾ ವೈರಸ್ 23 ರಿಂದ 27 ಅಡಿ ದೂರದವರೆಗೂ ಚಲಿಸಬಲ್ಲದು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಅಮೆರಿಕ ಮೂಲದ ಎಂಐಟಿ ವಿಜ್ಞಾನಿ ಮತ್ತು ಪ್ರಾಧ್ಯಾಪಕಿ ಲಿಡಿಯಾ ಬೌರೌಬಾ ಅವರು ಈ ಮಾಹಿತಿ ನೀಡಿದ್ದಾರೆ.
ಲಿಡಿಯಾ ಬೌರೌಬಾ ಅವರು ಕೊರೋನಾ ವೈರಸ್ ಮೇಲೆ ತಮ್ಮ ಸಂಶೋಧನೆ ನಡೆಸಿದ್ದು, ಈ ವೇಳೆ ವೈರಸ್ ಕುರಿತ ಹಲವು ಅಚ್ಚರಿಯ ಸಂಗತಿಗಳನ್ನು ಹೊರಹಾಕಿದ್ದಾರೆ.
ಕೊರೋನಾ ವೈರಸ್ ಗಾಳಿಯಲ್ಲಿ ಹರಡುವುದಿಲ್ಲ ಎಂಬ ವಾದವನ್ನು ಅಲ್ಲಗಳೆದಿರುವ ಲಿಡಿಯಾ ಬೌರೌಬಾ, ಕೊರೋನಾ ವೈರಸ್ ಗಾಳಿಯಲ್ಲಿ ಗಂಟೆ ಕಾಲ ಜೀವಿಸಬಲ್ಲದು. ಹೀಗಾಗಿ ಹಾಲಿ ಸೋಷಿಯಲ್ ಡಿಸ್ಟಾನ್ಸಿನಿಂಗ್ ನಂತಹ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಿ ಅಂತರದ ಪ್ರಮಾಣವನ್ನು ಹೆಚ್ಚಿಸಬೇಕು. ಇಲ್ಲವಾದಲ್ಲಿ ವೈರಸ್ ನಿಯಂತ್ರಣ ಅಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ವೈದ್ಯಕೀಯ ಸಿಬ್ಬಂದಿ ಕೋವಿಡ್ 19 ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಬಹಳ ಜಾಗರೂಕರಾಗಿರಬೇಕು. ಸಣ್ಣ ಅಜಾಗರೂಕತೆಯಿಂದಲೂ ಅವರಿಗೂ ಸೋಂಕು ತಗುಲುವಂತೆ ಮಾಡುತ್ತದೆ. ಹೀಗಾಗಿ ವೈದ್ಯಕೀಯ ಸಿಬ್ಬಂದಿಗೆ ಅತ್ಯಾಧುನಿಕ ಮತ್ತು ದೇಹದ ಎಲ್ಲ ಅಂಗಗಳನ್ನೂ ಮುಚ್ಚುವ ರಕ್ಷಣಾ ಕವಚ ನೀಡಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!