ತಿರುವನಂತಪುರ: ಕೇರಳದಲ್ಲಿ ಕೊರೋನಾ ವೈರಸ್ ದಾಳಿಗೆ ತುತ್ತಾಗಿರುವ ವಿದ್ಯಾರ್ಥಿನಿಯೊಬ್ಬಳನ್ನು ತ್ರಿಶ್ಯೂರ್ ಮೆಡಿಕಲ್ ಕಾಲೇಜಿಗೆ ಸ್ಛಳಾಂತರಿಸಲಾಗಿದೆ. ಪ್ರತ್ಯೇಕ ವಾರ್ಡ್ ನಲ್ಲಿ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಆರೋಗ್ಯ ಪರಿಸ್ಥಿತಿ ಸುಧಾರಿಸಿದೆ ಎಂದು ಮೂಲಗಳು ಹೇಳಿವೆ. ಚೀನಾದಿಂದ ಹಿಂತಿರುಗಿದ ವಿದ್ಯಾರ್ಥಿನಿಯಲ್ಲಿ ರೋಗ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಮಧ್ಯೆ ರಾಜ್ಯದ ಎಲ್ಲ 14 ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದೆ.