Sunday, July 3, 2022

ರಾಜ್ಯಪಾಲರಿಗೆ ಕೊರೋನಾ ಸೋಂಕು; ಆಸ್ಪತ್ರೆಗೆ ದಾಖಲು

Follow Us

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ರಾಜಭವನದ ಸಿಬ್ಬಂದಿ ಸೋಂಕಿಗೆ ತುತ್ತಾದ ಬಳಿಕ‌ ಇದೀಗ ರಾಜ್ಯಪಾಲರಾದ ಬನ್ವರಿಲಾಲ್ ಪುರೋಹಿತ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ವಾರ ರಾಜಭವನದ 84 ಸಿಬ್ಬಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಆ ಬಳಿಕ ರಾಜ್ಯಪಾಲರನ್ನು ಹೋಂಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಇದೀಗ ಕೊರೋನಾ ಸೋಂಕಿಗೆ ತುತ್ತಾದ ಹಿನ್ನೆಲೆಯಲ್ಲಿ 81 ವರ್ಷದ ರಾಜ್ಯಪಾಲರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾವೇರಿ ಆಸ್ಪತ್ರೆ ಹಾಗೂ ರಾಜಭವನದ ಮೂಲಗಳು ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದ್ದು, ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.
ಜೂನ್ 23 ರಂದು ರಾಜಭವನದ ಓರ್ವ ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 110
ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ಪೈಕಿ 80ಕ್ಕೂ ಹೆಚ್ಚು ಸಿಬ್ಬಂದಿಗೆ ಸೋಂಕು ತಗುಲಿತ್ತು.
ಸೋಂಕಿತರು ರಾಜ್ಯಪಾಲರ ಸಂಪರ್ಕಕ್ಕೆ ಬಂದಿಲ್ಲ ಎನ್ನಲಾಗಿದ್ದು, ಆದರೂ ರಾಜ್ಯಪಾಲರಿಗೆ ಸೋಂಕು ತಗುಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!