Sunday, July 3, 2022

ನಿರ್ದೇಶಕ ರಾಜಮೌಳಿ ಸೇರಿ ಮನೆಯ ಸದಸ್ಯರಿಗೆಲ್ಲ ಕೊರೋನಾ ಸೋಂಕು

Follow Us

ಹೈದರಾಬಾದ್​: ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್​. ಎಸ್. ರಾಜಮೌಳಿ ಹಾಗೂ ಕುಟುಂಬದ ಸದಸ್ಯರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಎಲ್ಲರೂ ಹೋಮ್ ಕ್ವಾರಂಟೈನ್’ನಲ್ಲಿದ್ದಾರೆ.
ಈ ಬಗ್ಗೆ ರಾಜಮೌಳಿ ಟ್ವಿಟರ್​ ನಲ್ಲಿ ಈ ಮಾಹಿತಿ ನೀಡಿದ್ದು, ಕೆಲ ದಿನಗಳ ಹಿಂದೆ ನನಗೆ ಹಾಗೂ ಮನೆಯವರಿಗೆಲ್ಲ ಸಣ್ಣ ಜ್ವರ ಬಂದಿತ್ತು. ಹೀಗಾಗಿ ಕೊರೋನಾ ಪರೀಕ್ಷೆಗೆ ಒಳಗಾದೆವು. ಪರೀಕ್ಷೆಯಲ್ಲಿ ಕೊರೋನಾ ಇರುವುದು ಖಚಿತವಾಗಿದೆ. ವೈದ್ಯರ ಸಲಹೆ ಮೇರೆಗೆ ನಾವೆಲ್ಲರೂ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದೇವೆ ಎಂದು ತಿಳಿಸಿದ್ದಾರೆ.
ಈಗ ಚೇತರಿಸಿಕೊಳ್ಳುತ್ತಿದ್ದೇವೆ. ಎಲ್ಲ ಮುಂಜಾಗೃತೆ ಹಾಗೂ ನಿರ್ದೇಶನಗಳನ್ನು ಪಾಲಿಸುತ್ತಿದ್ದೇವೆ. ಪ್ಲಾಸ್ಮಾ ದಾನ ಮಾಡುವ ಉದ್ದೇಶ ಹೊಂದಿದ್ದು, ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದನ್ನು ಕಾಯುತ್ತಿದ್ದೇವೆ ಎಂದು ರಾಜಮೌಳಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!