Saturday, April 17, 2021

ದೇಶಾದ್ಯಂತ 24 ಗಂಟೆಯಲ್ಲಿ 2,573 ಮಂದಿಗೆ ಕೊರೋನಾ ಸೋಂಕು

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಬರೊಬ್ಬರಿ 2,573 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 42,836ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇನ್ನು ನಿನ್ನೆ ಒಂದೇ ದಿನ 83 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1389ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಟ್ಟು 29,453 ಸಕ್ರಿಯ ಕೋವಿಡ್ -19 ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 1,074 ಕೋವಿಡ್ -19 ರೋಗಿಗಳು ಚೇತರಿಸಿಕೊಂಡಿದ್ದಾರೆ. ಈವರೆಗೆ 11,706 ಜನರು ಕೊರೋನಾ ವೈರಸ್’ನಿಂದ ಗುಣಮುಖರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!