Saturday, November 26, 2022

ರಾಮ ಜನ್ಮಭೂಮಿ ಟ್ರಸ್ಟ್ ವಿರುದ್ಧ ಭೂ ಹಗರಣ ಆರೋಪ

Follow Us

newsics.com

ಅಯೋಧ್ಯೆ: ಭಗವಾನ್ ಶ್ರಿರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ರಾಮ ಜನ್ಮ ಭೂಮಿ ಟ್ರಸ್ಟ್ ವಿರುದ್ಧ ಗಂಭೀರ ಭೂ ಹಗರಣ ಆರೋಪ ಕೇಳಿ ಬಂದಿದೆ.

ಇಬ್ಬರು ವ್ಯಕ್ತಿಗಳು ಎರಡು ಕೋಟಿ ರೂಪಾಯಿಗೆ ಖರೀದಿಸಿದ ಭೂಮಿಯನ್ನು ಕೆಲವೇ ನಿಮಿಷಗಳ ಅಂತರದಲ್ಲಿ 18.5 ಕೋಟಿ ರೂಪಾಯಿಗೆ ರಾಮ ಜನ್ಮಭೂಮಿ ಟ್ರಸ್ಟ್ ಖರೀದಿಸಿದೆ. ಇದರಲ್ಲಿ ಭಾರೀ ಹಗರಣ ನಡೆದಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಪವನ್ ಪಾಂಡೆ ಮತ್ತು  ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಈ ಸಂಬಂಧ ಗಂಭೀರ ಆರೋಪ ಮಾಡಿದ್ದಾರೆ. ಬಡವರು ಕಾಣಿಕೆಯಾಗಿ ನೀಡಿದ ಹಣವನ್ನು ಟ್ರಸ್ಟ್ ದುರುಪಯೋಗಪಡಿಸಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಕೊರೋನಾದಿಂದ ಮೃತಪಟ್ಟವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!