Saturday, April 17, 2021

ದೇಶದ ಹೆಸರು ಬದಲಾವಣೆ; ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ

ನವದೆಹಲಿ: ದೇಶದ ಹೆಸರು ಬದಲಾವಣೆ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಇಂಡಿಯಾ ಬದಲಿಗೆ ಭಾರತ ಅಥವಾ ಹಿಂದೂಸ್ಥಾನ ಎಂದು ಹೆಸರು ಬದಲಿಸಬೇಕೆಂದು ಸುಪ್ರೀಂ ಕೋರ್ಟ್ ಗೆ ದೆಹಲಿಯ ನಮಃ ಎಂಬುವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೊಂಡಿದ್ದ ಸುಪ್ರೀಂ ಯಾವುದೇ ದಿನಾಂಕವನ್ನು ನೀಡದೆ ವಿಚಾರಣೆಯನ್ನು ಮುಂದೂಡಿದೆ.
ಮುಘಲ್ ದೊರೆಗಳ ಆಡಳಿತದಲ್ಲಿ ಹಿಂದೂಸ್ಥಾನವಾಗಿದ್ದ ನಮ್ಮ ದೇಶವು, ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ ಇಂಡಿಯಾ ಆಗಿ ಬದಲಾಗಿದೆ. ಬ್ರಿಟಿಷರು ಇಟ್ಟ ಹೆಸರು ನಮಗೆ ಬೇಡ. ಹೀಗಾಗಿ ಭಾರತ ಅಥವಾ ಹಿಂದೂಸ್ಥಾನವಾಗಿ ಬದಲಿಸುವಂತೆ ಅರ್ಜಿದಾರ ನಮಃ ಮನವಿ ಮಾಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!