Thursday, December 9, 2021

ಲಾಕ್ ಡೌನ್ ಅವಧಿಯಲ್ಲಿ ಬಾವಿ ತೋಡಿದ ದಂಪತಿ

Follow Us

ಮುಂಬೈ;  ಲಾಕ್ ಡೌನ್ ಅವಧಿಯಲ್ಲಿ ಮನೆಯಲ್ಲಿಯೇ ಕಾಲ ಕಳೆಯುವುದು ಹೇಗೆ ಎಂಬುದು ಎಲ್ಲರ ಚಿಂತೆ. ಆದರೆ ಈ ಅವಧಿಯನ್ನು ಮಹಾರಾಷ್ಟ್ರದ ದಂಪತಿಯೊಬ್ಬರು ಸದುಪಯೋಗಪಡಿಸಿದ್ದಾರೆ.  ನೀರಿಗಾಗಿ ಪರಿತಪಿಸುತ್ತಿದ್ದ ಅವರು ಇದಕ್ಕೆ ಪರಿಹಾರ ಕಂಡುಕೊಂಡಿದ್ದಾರೆ.  ಪತಿ ಮತ್ತು ಪತ್ನಿ ಇಬ್ಬರು ಜತೆಯಾಗಿ ಮನೆಯ ಹಿತ್ತಲಿನಲ್ಲಿ 21 ದಿವಸದಲ್ಲಿ 25 ಅಡಿ ಆಳದ ಬಾವಿ ತೋಡಿದ್ದಾರೆ.  ಮಹಾರಾಷ್ಟ್ರದ ವಾಸಿಂ ಸಮೀಪದ ಕರ್ಕೆಡಾ ಗ್ರಾಮದ ಗಜಾನನ ಮತ್ತು ಅವರ ಪತ್ನಿ  ಈ ಸಾಧನೆ ಮೆರೆದಿದ್ದಾರೆ. ಬಾವಿಯಲ್ಲಿ ನೀರು ದೊರಕಿದ್ದು, ಅವರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!