NEWSICS.COM
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರತಿದಿನ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ (ನ.4) ಹೇಳಿದ್ದಾರೆ. ಸೋಂಕಿನ ಮೂರನೇ ಅಲೆ ದೆಹಲಿಯಲ್ಲಿ ಪ್ರಾರಂಭವಾಗಿದೆ ಆದರೆ ಸರ್ಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ನಿನ್ನೆ (ನ.3) ಮೊದಲ ಬಾರಿಗೆ 6,000 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ.ಕೋವಿಡ್ -19 ರೋಗಿಗಳಿಗೆ ಸಾಕಷ್ಟು ಹಾಸಿಗೆಗಳು ಇದೆ ಆದರೆ, ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ಗಳೊಂದಿಗೆ ಐಸಿಯು ಹಾಸಿಗೆಗಳ ಕೊರತೆ ಇದೆ ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಇದನ್ನು ಪರಿಹರಿಸಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.