Newsics.com
ನವದೆಹಲಿ: ಕೊಲ್ಕತ್ತಾ ಹೈಕೋರ್ಟ್ ಪಟಾಕಿ ಮಾರಾಟ ಮೇಲೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಟಾಕಿ ಮಾರಾಟ ನಿಷೇಧಿಸಿ ಕೊಲ್ಕತ್ತಾ ಹೈಕೋರ್ಟ್ ಆದೇಶ ನೀಡಿತ್ತು.
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ. ಹಬ್ಬಗಳು ಮುಖ್ಯ. ಇದರಲ್ಲಿ ಸಂಶಯವಿಲ್ಲ. ಆದರೆ ಹಬ್ಬಗಳಿಗಿಂತ ಪ್ರಾಣ ಅತೀ ಮುಖ್ಯ. ಇದನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ದೆಹಲಿ , ರಾಜಸ್ತಾನ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳು ಪಟಾಕಿ ಹಚ್ಚುವುದನ್ನು ನಿಷೇಧಿಸಿ ಆದೇಶ ಹೊರಡಿಸಿವೆ.
ಹಸಿರು ಪಟಾಕಿ ಮಾತ್ರ ಬಳಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮನವಿ ಮಾಡಿದ್ದಾರೆ.