ಕೊಚ್ಚಿ: ಕೋಳಿಕ್ಕೋಡ್ ವಿಮಾನ ನಿಲ್ದಾಣದ ರನ್ವೇನಲ್ಲಿ ಶುಕ್ರವಾರ (ಆ.7) ಸಂಜೆ ಲ್ಯಾಂಡಿಂಗ್ ವೇಳೆ ಅಪಘಾತಕ್ಕೆ ಈಡಾದ ಏರ್ ಇಂಡಿಯಾ ವಿಮಾನದಲ್ಲಿ 174 ಮಂದಿ ಪ್ರಯಾಣಿಕರಿದ್ದರು, ಪೈಲಟ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕೃತ ಮಾಹಿತಿ ಲಭಿಸಿದೆ.
ಈ ಹಿನ್ನೆಲೆಯಲ್ಲಿ ನಾಗರೀಕ ವಿಮಾನಯಾನ ಸಚಿವಾಲಯ ಈ ಅಪಘಾತದ ತನಿಖೆಗೆ ಆದೇಶಿಸಿದೆ.ದುಬೈನಿಂದ ಕಲ್ಲಿಕೋಟೆಗೆ ಬರುತ್ತಿದ್ದ ವಿಮಾನ ದುರಂತದ ಸಂತ್ರಸ್ತರಿಗೆ ಸಹಾಯವಾಣಿ ಸಂಖ್ಯೆ 056 546 3903, 0543090572, 0543090572, 0543090575, 0483-2719493, 0495 – 2376901 ಆರಂಭಿಸಲಾಗಿದೆ. ಲ್ಯಾಂಡಿಂಗ್ ವೇಳೆ ಸ್ಕಿಡ್ ಆಗಿದೆ, ಆದರೆ ಬೆಂಕಿ ಹೊತ್ತಿಕೊಂಡಿಲ್ಲ, ಭಾರಿ ಮಳೆ ನಡುವೆ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಅಗ್ನಿ ಶಾಮಕ ದಳ ಸಿಬ್ಬಂದಿ ಇದ್ದಾರೆ. ರನ್ವೇ 10ರಲ್ಲಿ ಸಾಗುವಾಗ ದುರಂತ ಸಂಭವಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಮಾಧ್ಯಮ ವಕ್ತಾರರಾದ ರಾಜೀವ್ ಜೈನ್ ಹೇಳಿದ್ದಾರೆ. ದುಬೈ- ಕೊಜಿಕೋಡ್ ವಿಮಾನ X1344 ಬೋಯಿಂಗ್ 737 ವಿಮಾನದಲ್ಲಿ 174 ಮಂದಿ ಪ್ರಯಾಣಿಕರು ಇದ್ದರು. ಸಂಜೆ 7:41ರಲ್ಲಿ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ವಿಮಾನಯಾನ ಸಂಸ್ಥೆಯ ಮೂಲಗಳು ತಿಳಿಸಿವೆ. ಸ್ಥಳದಲ್ಲಿ 24 ಅಂಬುಲೆನ್ಸ್ಗಳು ಹಾಗೂ ಅಗ್ನಿಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಎನ್ಡಿಆರ್ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ದಾರೆ. ವಿಮಾನದಲ್ಲಿ 174 ಪ್ರಯಾಣಿಕರು, 10 ಹಸುಳೆಗಳು, 2 ಪೈಲಟ್, 5 ಕ್ಯಾಬಿನ್ ಸಿಬ್ಬಂದಿ ಇದ್ದರು ಎಂದು ತಿಳಿದು ಬಂದಿದೆ. ಓರ್ವ ಪೈಲಟ್ ದೀಪರ್ ಸಾಥೆ ಎಂಬುವರು ಮೃತಪಟ್ಟಿದ್ದು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಕೋಳಿಕ್ಕೊಡ್’ನಲ್ಲಿ ವಿಮಾನ ಸ್ಕಿಡ್; ಪೈಲಟ್ ಸೇರಿ ಮೂವರ ಸಾವು, 35 ಮಂದಿಗೆ ಗಾಯ