newsics.com
ಅಹ್ಮದ್ ಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಖ್ಯಾತ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬ ಜಡೇಜಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಜಾಮ್ ನಗರ ಉತ್ತರ ವಿಧಾನಸಭಾ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧಿಸಿದ್ದರು.
ತಮ್ಮ ನಿಕಟ ಪ್ರತಿಸ್ಪರ್ಧಿಯನ್ನು 30,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ ಎಂದು ವರದಿಯಾಗಿದೆ. ಅಧಿಕೃತ ಘೋಷಣೆ ಇನ್ನೂ ಬಂದಿಲ್ಲ.
ಚುನಾವಣೆಯಲ್ಲಿ ಜಯ ಸಾಧಿಸಿರುವುದಾಗಿ ರಿವಾಬ ಜಡೇಜಾ ಘೋಷಿಸಿದ್ದಾರೆ. ಸಹಕಾರ ನೀಡಿದ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ನಾದಿನಿ ಮತ್ತು ಮಾವ ಚುನಾವಣೆಯಲ್ಲಿ ರಿವಾಬ ಜಡೇಜಾ ವಿರುದ್ಧ ಪ್ರಚಾರ ನಡೆಸಿದ್ದರು.