Wednesday, July 6, 2022

ಕೃಷಿ ಭೂಮಿಯಲ್ಲಿದ್ದ ಮೊಸಳೆ ರಕ್ಷಣೆ

Follow Us

ವಡೋದರಾ(ಗುಜರಾತ್): ಕೃಷಿ ಭೂಮಿಯಲ್ಲಿ ಕಾಣಿಸಿಕೊಂಡು ಕೃಷಿಕರ ಭಯಕ್ಕೆ ಕಾರಣವಾಗಿದ್ದ ಮೊಸಳೆಯೊಂದನ್ನು ರಕ್ಷಿಸಿ ಕಾಡಿನಲ್ಲಿ ಬಿಟ್ಟ ಘಟನೆ ಗುಜರಾತ್‌’ನ ಕೆಲನ್’ಪುರ್ ಗ್ರಾಮದಲ್ಲಿ ನಡೆದಿದೆ.
ವಡೋದರಾ ಜಿಲ್ಲೆಯ ಜನವಸತಿ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಸಳೆ ಪ್ರವೇಶಿಸಿದ ಏಳನೇ ಘಟನೆ ಇದಾಗಿದೆ. ಮೈ ವಡೋದರಾ ಟ್ವೀಟರ್ ಖಾತೆಯಲ್ಲಿ ಮೊಸಳೆ ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಪೋಸ್ಟ್ ಮಾಡಲಾಗಿದೆ. ಏಳು ಅಡಿ ಉದ್ದದ ಮೊಸಳೆಯ ರಕ್ಷಣಾ ಕಾರ್ಯಾಚರಣೆ ವೇಳೆ ಅದು ಆಕ್ರಮಣಕಾರಿಯಾಗಿ ತಿರುಗಿ ಬೀಳುವುದನ್ನು ನೋಡಬಹುದಾಗಿದೆ.
ನಾವು ಪ್ರಾಣಿಗಳಿಗೆ ಸಹಾಯ ಮಾಡುವಾಗ ಅವು ನಮ್ಮ ಸಹಾಯಕ್ಕೆ ಬಂದಿದ್ದಾರೆ ಎಂದು ತಿಳಿದಿರುವುದಿಲ್ಲ. ಹೀಗಾಗಿ ಬಹಳ ಎಚ್ಚರಿಕೆಯಿಂದ ಕಾರ್ಯಾಚರಣೆ‌ ಮಾಡಬೇಕಾಗುತ್ತದೆ ಎಂದು ರಕ್ಷಣಾ ತಂಡದ ಸದಸ್ಯರು ಹೇಳಿದ್ದಾರೆ.

https://twitter.com/i/status/1284452380054974465 

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!