newsics.com
ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ಚೆನ್ನೈನ ಎಗ್ಮೋರ್ ಪ್ರದೇಶದಲ್ಲಿ ಭಾರೀ ಗಾಳಿಯಿಂದಾಗಿ ಹಲವು ಮರಗಳು ನೆಲಕ್ಕೆ ಅಪ್ಪಳಿಸಿವೆ.
ಎಡೆಬಿಡದೆ ಮಳೆ ಸುರಿಯುತ್ತಿದೆ. ರಸ್ತೆಗಳು ಜಲಾವೃತವಾಗಿವೆ.
ಆಂಧ್ರಪ್ರದೇಶದಲ್ಲಿ ಕೂಡ ಮಾಂಡೌಸ್ ಚಂಡ ಮಾರುತ ತನ್ನ ಪ್ರತಾಪ ತೋರಿಸಿದೆ. ತಿರುಪತಿಯಲ್ಲಿ ಕೂಡ ಮಳೆಯಾಗುತ್ತಿದೆ. ಭಕ್ತರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ