newsics.com
ನವದೆಹಲಿ: ಕೇಂದ್ರ ಸರ್ಕಾರ ಒಂದು ಕೋಟಿಗೂ ಹೆಚ್ಚು ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿದೆ.ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸೆಪ್ಟೆಂಬರ್ 2022ರಲ್ಲಿ ತುಟ್ಟಿಭತ್ಯೆಯನ್ನು ಶೇ.4 ರಿಂದ ಶೇ.38ಕ್ಕೆ ಹೆಚ್ಚಿಸಿತ್ತು. ಸರ್ಕಾರ ಪ್ರತಿ ವರ್ಷ ಎರಡು ಬಾರಿ ತುಟ್ಟಿಭತ್ಯೆಯನ್ನು ಪರಿಷ್ಕರಿಸುತ್ತದೆ. ಪ್ರತಿ ತಿಂಗಳು ಲೇಬರ್ ಬ್ಯೂರೋ ಪ್ರಕಟಿಸುವ ಕೈಗಾರಿಕಾ ಕಾರ್ಮಿಕರ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ತುಟ್ಟಿಭತ್ಯೆಯನ್ನು ಲೆಕ್ಕಹಾಕಲಾಗುತ್ತದೆ.
ತುಟ್ಟಿಭತ್ಯೆ ಹೆಚ್ಚಳ ನಿರ್ಧಾರದಿಂದ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರ ಕಳೆದ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.
ಈ ವರ್ಷದ ಆರಂಭದಿಂದ ಅಂದರೆ 2023ರ ಜನವರಿ 1 ರಿಂದ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹಾಗೂ ಪಿಂಚಣಿದಾರರಿಗೆ ಡಿಆರ್ ಹೆಚ್ಚುವರಿ ಕಂತಿನ ಹಣ ಬಿಡುಗಡೆ ಮಾಡಲು ಸಟಿವ ಸಂಪುಟ ಅನುಮೋದನೆ ನೀಡಿದೆ.
ಕೇಂದ್ರ ಕ್ಯಾಬಿನೆಟ್ ನಿರ್ಧಾರದಿಂದ ಕೇಂದ್ರದ 47.58 ಲಕ್ಷ ಉದ್ಯೋಗಿಗಳು ಹಾಗೂ 69.76 ಲಕ್ಷ ಪಿಂಚಣಿದಾರರಿಗೆ ನೆರವಾಗಲಿದೆ.
ಸಚಿವ ಸಂಪುಟದ ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ 12,815 ಕೋಟಿ ರೂಪಾಯಿ ಹೊರೆಯಾಗಲಿದೆ. ಒಟ್ಟಾರೆಯಾಗಿ ಕೇಂದ್ರದ 1 ಕೋಟಿ ಉದ್ಯೋಗಿಗಳಿಗೆ ಪ್ರಯೋಜನವಾಗಲಿದೆ.
PSI ಅಕ್ರಮ ನೇಮಕಾತಿ; ವಿಚಾರಣೆಗೆ ಒಳಪಟ್ಟಿದ್ದ ಸಿದ್ದಾಪುರದ ವ್ಯಕ್ತಿ ಆತ್ಮಹತ್ಯೆ