Saturday, April 17, 2021

ನೂರಕ್ಕೂ ಹೆಚ್ಚು ಸಾಕುಹಂದಿಗಳ ಸಾವು: ಹಂದಿಜ್ಚರ ಆತಂಕ

newsics.com
ಗುವಾಹಟಿ(ಮಿಜೋರಾಂ): ಲುಂಗ್ಲೇ ಜಿಲ್ಲೆಯ ಲುಂಗ್ ಸೆನ್ ಗ್ರಾಮದಲ್ಲಿ 100 ಕ್ಕೂ ಹೆಚ್ಚು ಸಾಕು ಹಂದಿಗಳು ಸಾವನ್ನಪ್ಪಿವೆ.  ಆಫ್ರಿಕನ್ ಹಂದಿಜ್ವರದಿಂದ ಈ ಸಾಕು ಹಂದಿಗಳು ಮೃತಪಟ್ಟಿವೆ ಎಂದು ಪ್ರಾಥಮಿಕ ಆರೋಗ್ಯ ವರದಿ ಸ್ಪಷ್ಟಪಡಿಸಿದೆ.
ಈ ಪ್ರದೇಶದಲ್ಲಿ ರೋಗ ಹರಡದಂತೆ  ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಶುವೈದ್ಯ ಇಲಾಖೆ ಮೂಲಗಳು ತಿಳಿಸಿವೆ.     ಗ್ರಾಮಗಳಿಗೆ ಹಂದಿಗಳ ಆಮದು ಮತ್ತು ರಫ್ತು ನಿರ್ಬಂಧಿಸಲಾಗಿದೆ. ಈ ಪ್ರದೇಶ ಮಯನ್ಮಾರ್’ನೊಂದಿಗೆ ಗಡಿ ಹಂಚಿಕೊಂಡಿದೆ. ಮೃತಪಟ್ಟ ಹಂದಿಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮಿಜೋರಾಂ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ನಿರ್ದೇಶಕ ಡಾ. ಹಮಾರ್ಕ್ ಕುಂಗ ತಿಳಿಸಿದ್ದಾರೆ.
ಭೋಪಾಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಹೈಸೆಕ್ಯುರಿಟಿ ಪ್ರಾಣಿಗಳ ರೋಗ ಸಂಸ್ಥೆಗೆ ಮಾದರಿಗಳನ್ನು ಕಳುಹಿಸಲಾಗಿದೆ. ಕಳೆದ ವರ್ಷ ಅಸ್ಸಾಂನಲ್ಲಿ ಸಾವಿರಾರು ದೇಶಿಯ ಹಂದಿಗಳು ಮೃತಪಟ್ಟಿದ್ದವು. ಆದರೆ ಈ ರೋಗ ಹಂದಿಗಳಿಂದ ಮನುಷ್ಯರಿಗೆ ಹರಡುವುದಿಲ್ಲ ಎಂದು ತಿಳಿದುಬಂದಿದೆ.

ಸೋಫಿಯಾನದಲ್ಲಿ ಗುಂಡಿನ ಚಕಮಕಿ: 3 ಉಗ್ರರ ಹತ್ಯೆ, ಓರ್ವನ ಸೆರೆ

ಸಿ.ಆರ್. ಸಿಂಹ ಪತ್ನಿ ಶಾರದಾ ಸಿಂಹ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!