newsics.com
ಮಡಿಕೇರಿ: ಕೊರೋನಾ ಸೋಂಕಿನಿಂದ ಕೊಡಗು ಮೂಲದ ಬಿಎಸ್’ಎಫ್ ಯೋಧರೊಬ್ಬರು ಗುರುವಾರ ಅಸುನೀಗಿದ್ದಾರೆ.
ಕೊರೋನಾ ಪರಿಣಾಮ ಬಹು ಅಂಗಾಂಗ ವೈಫಲ್ಯದಿಂದ ಕೇರಳದ ತಿರುವನಂತಪುರಂನಲ್ಲಿ ಗುರುವಾರ ಬೆಳಗ್ಗೆ ನಿಧನರಾದರು.
ಕೇರಳದ ತಿರುವನಂತಪುರಂನಲ್ಲಿರುವ ಬಿಎಸ್‌ಎಫ್ ಸೆಕ್ಟರ್ ಹೆಡ್ ಕ್ವಾರ್ಟರ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ, ವಿರಾಜಪೇಟೆ ಸಮೀಪದ ನಲ್ವತ್ತೋಕ್ಲು ಗ್ರಾಮದವರಾದ ದುದ್ದಿಯಂಡ ಎ.ಮಜೀದ್ (50) ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದರು.
ದೇಶದ ವಿವಿಧ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿ ಕಳೆದ 4 ವರ್ಷಗಳಿಂದ ತಿರುವನಂತಪುರಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಮಜೀದ್ ಅವರು, ಕಳೆದ ಆಗಸ್ಟ್ ತಿಂಗಳ ಅಂತ್ಯದವರೆಗೂ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಇದೇ ತಿಂಗಳ ಮೊದಲ ವಾರದಲ್ಲಿ ದಿಢೀರನೆ ಇವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದರಿಂದ ತಿರುವನಂತಪುರಂನ ಮೆಡಿಕಲ್ ಕಾಲೇಜಿನಲ್ಲಿರುವ ಕೋವಿಡ್ ವಿಶೇಷ ಆಸ್ಪತ್ರೆಗೆ ದಾಖಲಾಗಿದ್ದರು.
ತಮ್ಮ ಎರಡೂ ಕಿಡ್ನಿ ಮತ್ತು ಹೃದಯ ಸಂಬಂಧಿ ಕಾಯಿಲೆ ವೃದ್ಧಿಸಿದ ಪರಿಣಾಮ ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಜಿದ್ ಅವರು, ಯಾವುದೇ ಉನ್ನತ ಮಟ್ಟದ ಚಿಕಿತ್ಸೆಗೂ ಸ್ಪಂದಿಸದೆ ಗುರುವಾರ ಬೆಳಗ್ಗೆ 7 ಗಂಟೆಗೆ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಕೋವಿಡ್ ಆಸ್ಪತ್ರೆಯಲ್ಲಿ ನಿಧನರಾದರು.
ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ಯುವ ಉದ್ದೇಶದಿಂದ ಮತ್ತೊಮ್ಮೆ ಕೋವಿಡ್ ಆಂಟಿಜೆನ್ ಟೆಸ್ಟಿಗೆ ಒಳಪಡಿಸಲಾಯಿತು. ಈ ಸಂದರ್ಭದಲ್ಲೂ ಫಲಿತಾಂಶ ಪಾಸಿಟಿವ್ ಬಂದ ಕಾರಣ ಮಜೀದ್ ಅವರ ಅಂತ್ಯಕ್ರಿಯೆಯನ್ನು ತಿರುವನಂತಪುರಂನಲ್ಲೆ ನಡೆಸಲು ಬಿಎಸ್‌ಎಫ್ ಅಧಿಕಾರಿಗಳು ನಿರ್ಧರಿಸಿದರು.
ಕೊರೋನಾ ಸೋಂಕಿನಿಂದ ಕೊಡಗಿನ ಯೋಧ ಸಾವು, ಕೇರಳದಲ್ಲೇ ಅಂತ್ಯಕ್ರಿಯೆ
Follow Us