Wednesday, October 5, 2022

ಹೈದರಾಬಾದ್’ಗೆ ಸೋಲು; ಐಪಿಎಲ್ ಫೈನಲ್‌’ಗೆ ಡೆಲ್ಲಿ

Follow Us

newsics.com
ಅಬುಧಾಬಿ: ಡೆಲ್ಲಿ ಕ್ಯಾಪಿಟಲ್ಸ್‌ ಐಪಿಎಲ್‌ ಕೂಟದಲ್ಲೇ ಮೊದಲ ಸಲ ಪ್ರಶಸ್ತಿ ಸುತ್ತಿಗೆ ನೆಗೆದು ಇತಿಹಾಸ ನಿರ್ಮಿಸಿದೆ. ರವಿವಾರದ ದ್ವಿತೀಯ ಕ್ವಾಲಿಫೈಯರ್‌ ಪಂದ್ಯದಲ್ಲಿ ಅಯ್ಯರ್‌ ಪಡೆ ಹೈದರಾಬಾದನ್ನು 17 ರನ್ನುಗಳಿಂದ ಮಣಿಸಿ ಕೂಟದಿಂದ ಹೊರದಬ್ಬಿತು. ಮಂಗಳವಾರ ಮುಂಬೈ ಮತ್ತು ಡೆಲ್ಲಿ ಪ್ರಶಸ್ತಿ ಸಮರಕ್ಕೆ ಇಳಿಯಲಿವೆ.
ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ 3 ವಿಕೆಟ್‌ಗೆ 189 ರನ್ ಕಲೆಹಾಕಿತು. ಪ್ರತಿಯಾಗಿ ಸನ್‌ರೈಸರ್ಸ್‌ ತಂಡ ಕೇನ್ ವಿಲಿಯಮ್ಸನ್ (67ರನ್, 45 ಎಸೆತ, 5 ಬೌಂಡರಿ, 4 ಸಿಕ್ಸರ್) ಹಾಗೂ ಅಬ್ದುಲ್ ಸಮದ್ (33 ರನ್, 16 ಎಸೆತ, 2 ಬೌಂಡರಿ, 2 ಸಿಕ್ಸರ್) ಜೋಡಿಯ ಪ್ರತಿಹೋರಾಟದ ನಡುವೆಯೂ 8 ವಿಕೆಟ್‌ಗೆ 172 ರನ್ ಗಳನ್ನಷ್ಟೇ ಗಳಿಸಿತು. ಅನುಭವಿ ಎಡಗೈ ಆರಂಭಿಕ ಶಿಖರ್ ಧವನ್ (78 ರನ್, 50 ಎಸೆತ, 6 ಬೌಂಡರಿ, 2 ಸಿಕ್ಸರ್) ಹಾಗೂ ವೇಗಿಗಳಾದ ಕಗಿಸೊ ರಬಾಡ (29ಕ್ಕೆ 4), ಮಾರ್ಕಸ್ ಸ್ಟೋಯಿನಿಸ್ (26ಕ್ಕೆ 3) ಮಾರಕ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್-13ರಲ್ಲಿ ಎರಡನೇ ತಂಡವಾಗಿ ಫೈನಲ್ ಪ್ರವೇಶಿಸಿತು.
ಶೇಖ್ ಜಯೇದ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ 2016ರ ಚಾಂಪಿಯನ್ ಸನ್‌ರೈಸರ್ಸ್‌ ತಂಡವನ್ನು 17 ರನ್‌ಗಳಿಂದ ಮಣಿಸುವ ಮೂಲಕ ಡೆಲ್ಲಿ ತಂಡ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಶಸ್ತಿ ಸುತ್ತಿನಲ್ಲಿ ಅವಕಾಶ ಪಡೆಯಿತು.

ಪತ್ನಿಗೆ ಪ್ರತಿ ತಿಂಗಳು 1.5 ಲಕ್ಷ ನೀಡಲು ಉದ್ಯಮಿಪತಿಗೆ ಕೋರ್ಟ್ ಸೂಚನೆ

ಮುರಿದುಬಿದ್ದ ಮದುವೆ; ನೊಂದ ಯುವತಿ ಆತ್ಮಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!