ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಜೆ 7.30ಕ್ಕೆ ಮಹತ್ವದ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಭಾರತ – ಚೀನಾ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ಈ ಪತ್ರಿಕಾಗೋಷ್ಠಿ ಅತ್ಯಂತ ಮಹತ್ವ ಪಡೆದುಕೊಂಡಿದೆ.
ವಾಸ್ತವ ನಿಯಂತ್ರಣ ರೇಖೆಯಲ್ಲಿರುವ ನಾಲ್ಕು ಶಿಖರಗಳ ಮೇಲೆ ಇಂದು ಭಾರತದ ಸೈನಿಕರು ತಮ್ಮ ನಿಯಂತ್ರಣ ಸ್ಥಾಪಿಸಿದ್ದಾರೆ ಎಂಬ ವರದಿ ಕೂಡ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಅವರ ಪತ್ರಿಕಾಗೋಷ್ಠಿ ಕುತೂಹಲ ಕೆರಳಿಸಿದೆ.