ನವದೆಹಲಿ: ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಜನವರಿ 22ರಂದು ನಿಗದಿಯಾಗಿದ್ದ ಮರಣ ದಂಡನೆ ಶಿಕ್ಷೆ ಮತ್ತೆ ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ. ಈ ಹಿಂದೆ ನಿಗದಿಯಾಗಿದ್ದ ಜನವರಿ 22 ರಂದು ಗಲ್ಲು ಶಿಕ್ಷೆ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ, ಹೈಕೋರ್ಟ್ ಗೆ ತಿಳಿಸಿದೆ. ಈ ಸಂಬಂಧ ಮತ್ತೊಮ್ಮೆ ಡೆತ್ ವಾರಂಟ್ ಜಾರಿಗೊಳಿಸುವಂತೆ ಕೆಳ ನ್ಯಾಯಾಲಯವನ್ನು ಮನವಿ ಮಾಡುವುದಾಗಿ ಸರ್ಕಾರ ಹೇಳಿದೆ. ಕ್ಷಮಾದಾನ ಅರ್ಜಿ ಇತ್ಯರ್ಥವಾಗುವವರೆಗೆ ಮರಣದಂಡನೆ ಶಿಕ್ಷೆ ಜಾರಿಯಾಗುವ ಸಾಧ್ಯತೆ ಕಡಿಮೆಯಾಗಿದೆ.