newsics.com
ನವದೆಹಲಿ: ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್’ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ನನ್ನು ದೆಹಲಿ ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದ್ದಾರೆ.
ಖಾಲಿದ್ ವಿರುದ್ಧ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ ಹಾಗೂ ಯುಎಪಿಎ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
ದೆಹಲಿ ಪೊಲೀಸ್ ಅಪರಾಧ ವಿಭಾಗದ ಅಧಿಕಾರಿಗಳು ಉಮರ್ ಖಾಲಿದ್ ನನ್ನು ಕೆಲವು ಗಂಟೆಗಳ ಕಾಲ ವಿಚಾರಣೆ ನಡೆಸಿ, ಬಳಿಕ ಬಂಧಿಸಿದ್ದಾರೆ. ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿದ್ದ ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಉಮರ್ ಖಾಲೀದ್, ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಸ್ವರಾಜ್ ಅಭಿಯಾನ್ ನಾಯಕ ಯೋಗೇಂದ್ರ ಯಾದವ್, ಅರ್ಥಶಾಸ್ತ್ರಜ್ಞರಾದ ಜಯತಿ ಘೋಷ್, ದೆಹಲಿ ವಿವಿ ಪ್ರಾಧ್ಯಾಪಕ, ಕಾರ್ಯಕರ್ತ ಅಪೂರ್ವಾನಂದ್ ಹಾಗೂ ಡಾಕ್ಯುಮೆಂಟರಿ ಫಿಲ್ಮ್ ಮೇಕರ್ ರಾಹುಲ್ ರಾಯ್ ಅವರುಗಳನ್ನು ಸಹ ಪಿತೂರಿದಾರರು ಎಂದು ಆರೋಪಿಸಿದ್ದರು.
ದೆಹಲಿ ಸಿಎಎ ಗಲಭೆ; ಉಮರ್ ಖಾಲಿದ್ ಬಂಧನ
Follow Us