ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸಲು ಹೊಸದಾಗಿ ಡೆತ್ ವಾರಂಟ್ ಜಾರಿಗೊಳಿಸುವಂತೆ ಕೋರಿ ತಿಹಾರ್ ಜೈಲಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಲಯ ತಿರಸ್ಕರಿಸಿದೆ.
ಈಗಾಗಲೇ ದೆಹಲಿ ಹೈಕೋರ್ಟ್ ಅಪರಾಧಿಗಳಿಗೆ, ಲಭ್ಯವಿರುವ ಎಲ್ಲಾ ಕಾನೂನು ಆಯ್ಕೆಗಳನ್ನು ಬಳಸಿಕೊಳ್ಳಲು ಒಂದು ವಾರದ ಕಾಲಾವಕಾಶ ನೀಡಿರುವ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಡೆತ್ ವಾರಂಟ್ ಜಾರಿಗೊಳಿಸಲಾಗದು. ಕಾನೂನು ಒಂದು ವ್ಯಕ್ತಿಗೆ ಅವಕಾಶ ಕಲ್ಪಿಸಿದಾಗ ಆತನನ್ನು ಗಲ್ಲಿಗೇರಿಸುವುದು ಅಪರಾಧವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.