newsics.com
ನವದೆಹಲಿ: ಬ್ರಿಟನ್ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿಮಾನ ಯಾನ ಸಂಸ್ಥೆಗಳು ದುಬಾರಿ ದರ ವಸೂಲಿ ಮಾಡುತ್ತಿವೆ ಎಂದು ಆರೋಪಿಸಲಾಗಿದೆ.
ದೆಹಲಿ ಲಂಡನ್ ವಿಮಾನ ಯಾನ ಭಾರೀ ದುಬಾರಿಯಾಗಿದೆ. 4 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದಲ್ಲಿ ಕೆಲಸ ಮಾಡುತ್ತಿರುವ ಐಎಎಸ್ ಅಧಿಕಾರಿಯೊಬ್ಬರು ಆರೋಪಿಸಿದ್ದರು.
ಸಾಮಾಜಿಕ ಜಾಲ ತಾಣಗಳ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯ, ಸಂಬಂಧಿತ ವಿಮಾನ ಯಾನ ಸಂಸ್ಥೆಯಿಂದ ಸ್ಪಷ್ಟೀಕರಣ ಕೋರಿದೆ.
ಆಗಸ್ಟ್ ತಿಂಗಳಲ್ಲಿ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಂದ ದುಬಾರಿ ದರ ವಸೂಲಿ ಮಾಡುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.
ನೀರಜ್ ಚೋಪ್ರಾಗೆ ಕಾಶೀನಾಥ್ ಕೋಚ್ ಆಗಿರಲಿಲ್ಲ: ಸ್ಪಷ್ಟೀಕರಣ ನೀಡಿದ ಅಥ್ಲೆಟಿಕ್ಸ್ ಸಂಸ್ಥೆ