newsics.com
ದೆಹಲಿ: ಮಹಾನಗರ ಪಾಲಿಕೆಯಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿಗೆ ಈ ಬಾರಿಯ ಚುನಾವಣೆಯಲ್ಲಿ ಹಿನ್ನಡೆಯಾಗಲಿದೆ ಎಂದು ಇಂಡಿಯಾ ಟುಡೆ ಸಮೀಕ್ಷೆ ಹೇಳುತ್ತಿದೆ.
ಪಾಲಿಕೆಯನ್ನು ಬಿಜೆಪಿ ಮಣಿಸಿ ಆಮ್ ಆದ್ಮಿ ಪಾರ್ಟಿ ಅಧಿಕಾರಕ್ಕೆ ಮರಳಿದೆ ಎಂದು ಸಮೀಕ್ಷೆ ಹೇಳಿದೆ. ಈ ಬಾರಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸ್ಥಾನ 69 ರಿಂದ 91ಕ್ಕೆ ಕುಸಿಯಲಿದೆ ಎಂದಿದೆ. ಆದರೆ ಆಮ್ ಆದ್ಮಿ ಪಾರ್ಟಿ ಸ್ಥಾನ 149 ರಿಂದ 171ಕ್ಕೆ ಏರಿಕೆಯಾಗಲಿದೆ ಎನ್ನುತ್ತಿದೆ ಸಮೀಕ್ಷೆ.
ಈ ಮೂಲಕ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿರುವ ಆಮ್ ಆದ್ಮಿ ಪಾರ್ಟಿ ಮಹಾ ನಗರ ಪಾಲಿಕೆಯಲ್ಲೂ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆ ಹೇಳುತ್ತಿದೆ.