newsics.com
ನವದೆಹಲಿ: ರಾಜಧಾನಿ ದೆಹಲಿಯ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಒಟ್ಟು 250 ವಾರ್ಡ್ ಗಳ ಫಲಿತಾಂಶ ಮಧ್ಯಾಹ್ನದೊಳಗೆ ಪ್ರಕಟವಾಗುವ ಸಾಧ್ಯತೆಯಿದೆ.
ಆಡಳಿತಾರೂಢ ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಸೋಲು ಅನುಭವಿಸಲಿದೆ ಎಂದು ಮತದಾನೋತ್ತರ ಸಮೀಕ್ಷೆಗಳು ಸೂಚಿಸಿವೆ. ದೆಹಲಿಯಲ್ಲಿ ಆಪ್ ಸರ್ಕಾರ ಇದ್ದರೂ ಮಹಾ ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸುತ್ತಿತ್ತು.
ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಪ್ರಭಾವ ತಗ್ಗಿಸಲು ಬಿಜೆಪಿ ತನ್ನ ಎಲ್ಲ ಶಕ್ತಿಯನ್ನು ಈ ಚುನಾವಣೆಯಲ್ಲಿ ಬಳಸಿತ್ತು.