ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 11 ಗಂಟೆ ಹೊತ್ತಿಗೆ ಸ್ಪಷ್ಟ ಚಿತ್ರಣ ಹೊರಬೀಳುವ ನಿರೀಕ್ಷೆಯಿದೆ. ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, 672 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ನಡೆಸುತ್ತಿದ್ದಾರೆ. ಫೆಬ್ರವರಿ 8ರಂದು ಮತ ದಾನ ನಡೆದಿದ್ದು, ಶೇಕಡ 62.59 ಮತದಾನವಾಗಿದೆ. ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಆಪ್ ಮತ್ತೆ ಅಧಿಕಾರಕ್ಕೆ ಬರುವ ಮುನ್ಸೂಚನೆ ನೀಡಿದ್ದು, ಕಮಲ ಪಾಳಯದಲ್ಲಿ ಆತಂಕ ಸೃಷ್ಟಿಸಿದೆ.