ನವದೆಹಲಿ: ದೇಶದ ಗಮನ ಸೆಳೆದಿರುವ ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಫೆಬ್ರವರಿ 11 ರಂದು ನಡೆಯಲಿದೆ. ದೆಹಲಿ ಮುಖ್ಯ ಚುನಾವಣಾ ಅಧಿಕಾರಿ ರಣಬೀರ್ ಸಿಂಗ್ ಈ ಕುರಿತು ಮಾಹಿತಿ ನೀಡಿದ್ದಾರೆ. 21 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಬೆಳಿಗ್ಗೆ ಎಂಟು ಗಂಟೆಗೆ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ಒಂದೊಂದು ಹಾಲ್ ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಮಧ್ಯೆ ಇವಿಎಂ ಇರಿಸಲಾಗಿರುವ ಕೇಂದ್ರಗಳಿಗೆ ಗರಿಷ್ಟ ಭದ್ರತೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.