ಕೊಚ್ಚಿ: ಕರಾವಳಿ ತೀರ ನಿಯಂತ್ರಣ ಕಾನೂನು ಉಲ್ಲಂಘಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಕೊಚ್ಚಿ ಸಮೀಪದ ಮಾರಾಡ್ ನಲ್ಲಿ ಕೈಗೊಳ್ಳಲಾದ ಕಟ್ಟಡ ಧ್ವಂಸ ಕಾರ್ಯಾಚರಣೆ ಕುರಿತು ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಗೆ ಇಂದು ಪ್ರಮಾಣ ಪತ್ರ ಸಲ್ಲಿಸಲಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಚಾಚೂ ತಪ್ಪದೇ ಪಾಲಿಸಿರುವ ಕುರಿತು ಎಲ್ಲ ಮಾಹಿತಿಯನ್ನು ಸರ್ಕಾರ ಸುಪ್ರೀಂ ಕೋರ್ಟ್ ಗೆ ನೀಡಲಿದೆ. ಈ ಮಧ್ಯೆ ಕಟ್ಟಡದ ಅವಶೇಷಗಳನ್ನ ಎರಡು ತಿಂಗಳಲ್ಲಿ ತೆರವುಗೊಳಿಸುವುದಾಗಿ ಕೇರಳ ಸರ್ಕಾರ ಹೇಳಿದೆ. ಎರಡು ದಿನ ನಡೆಸಲಾದ ಕಾರ್ಯಾಚರಣೆಯಲ್ಲಿ ನಾಲ್ಕು ಬೃಹತ್ ಅಪಾರ್ಟಮೆಂಟ್ ಗಳನ್ನು ನೆಲಸಮಗೊಳಿಸಲಾಗಿತ್ತು.