ದೆಹಲಿ: ಅತ್ಯಾಚಾರ, ಕೊಲೆಯಂತಹ ಗಂಭೀರ ಆರೋಪ ಎದುರಿಸುತ್ತಿರುವ ಬಿಡದಿಯ ನಿತ್ಯಾನಂದ ಸ್ವಾಮೀಜಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಗಡೀಪಾರು ಮಾಡಲು ಅಗತ್ಯವಾದ ಕಾನೂನು ಪ್ರಕ್ರಿಯೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ವಿದೇಶಕ್ಕೆ ಪಲಾಯನಗೈದಿರುವ ನಿತ್ಯಾನಂದ ಶ್ರೀಗಳಿಗೆ ರೆಡ್ ಕಾರ್ನರ್ ನೋಟಿಸ್ ನೀಡಲು ಅನುಕೂಲವಾಗುವಂತೆ ಅಗತ್ಯ ಮಾಹಿತಿ ನೀಡಬೇಕೆಂದು ಕೇಂದ್ರ ಸರ್ಕಾರ ರಾಜ್ಯಕ್ಕೆ ನಿರ್ದೇಶನ ನೀಡಿದೆ.
ಈ ಕುರಿತು ತನಿಖೆ ಕೈಗೊಂಡಿರುವ ರಾಜ್ಯ ತನಿಖಾ ತಂಡ ಸಿಬಿಐಗೆ ಪ್ರಕರಣದ ಸಮಗ್ರ ಮಾಹಿತಿ ಒದಗಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ರಾಜ್ಯಕ್ಕೆ ಬರೆದ ಪಾತ್ರದಲ್ಲಿ ಸೂಚಿಸಿದೆ.
ನಿತ್ಯಾನಂದ ವಿರುದ್ಧ ಗಡೀಪಾರು ಕ್ರಮ ಜರುಗಿಸಿ- ರಾಜ್ಯಕ್ಕೆ ಕೇಂದ್ರ ಸೂಚನೆ
Follow Us