Saturday, April 17, 2021

ಗುರುವಾಯೂರು ದೇವಸ್ಥಾನದಲ್ಲಿ ಇಂದಿನಿಂದ ಭಕ್ತರ ಪ್ರವೇಶ ರದ್ದು

ಗುರುವಾಯೂರು: ಕೇರಳದ  ಪ್ರಸಿದ್ದ ಗುರುವಾಯೂರು ದೇವಸ್ಥಾನದಲ್ಲಿ ಇಂದಿನಿಂದ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ತ್ರಿಶ್ಯೂರ್ ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಹೆಚ್ಚಾಗಿ ವರದಿಯಾಗಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಆದರೆ ಇಂದು ನಿಗದಿಯಾಗಿದ್ದ ಮದುವೆ ನಡೆಯಲಿದೆ. ದ್ವಾರಕೆ ಸಮುದ್ರದಲ್ಲಿ ಮುಳುಗಿದ್ದಾಗ ಅಲ್ಲಿದ್ದ ಕೃಷ್ಣ ವಿಗ್ರಹವನ್ನು ಗುರು ಮತ್ತು ವಾಯು ಗುರುವಾಯೂರಿನಲ್ಲಿ ಪ್ರತಿಷ್ಠಾಪಿಸಿದರು ಎಂಬುದು ಇಲ್ಲಿನ ಐತಿಹ್ಯ. ಇಲ್ಲಿ ಬಾಳೆಹಣ್ಣಿನ ತುಲಾಭಾರ ಸೇವೆ ಅತ್ಯಂತ  ವಿಶೇಷವಾಗಿದೆ. ವ್ಯಕ್ತಿಯ ಭಾರಕ್ಕೆ ಸರಿಸಮಾನವಾದ ಕದಳಿ ಬಾಳೆಹಣ್ಣನ್ನು ಶ್ರೀಕೃಷ್ಣನಿಗೆ ಈ ಮೂಲಕ ಅರ್ಪಿಸಲಾಗುತ್ತಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!