Tuesday, April 13, 2021

ಶಬರಿಮಲೆಗೆ ಭಕ್ತರ ಪ್ರವೇಶ:ಇಂದು ಮಹತ್ವದ ಸಭೆ

ತಿರುವನಂತಪುರಂ:  ಶಬರಿಮಲೆಗೆ ಭಕ್ತರ ಪ್ರವೇಶಕ್ಕೆ  ಅವಕಾಶ ನೀಡುವ ಸಂಬಂಧ ಇಂದು ಮಹತ್ವದ ಸಭೆ ನಡೆಯಲಿದೆ ಜೂನ್ 14ರಂದು ತಿಂಗಳ ಪೂಜೆಗೆ ಶಬರಿಮಲೆ ದೇವಸ್ಥಾನದ ಬಾಗಿಲು ತೆರೆಯಲು ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ಈ ಪ್ರಸ್ತಾಪಕ್ಕೆ ದೇವಸ್ಥಾನದ ಮುಖ್ಯ ಅರ್ಚಕರು ವಿರೋಧ ವ್ಯಕ್ತಪಡಿಸಿ  ಪತ್ರ ಬರೆದಿರುವ ಹಿನ್ನೆಲೆಯಲ್ಲಿ ವಿವಾದ ತಲೆದೋರಿದೆ. ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿ, ಶಬರಿಮಲೆ ದೇವಸ್ಥಾನದ ಮುಖ್ಯ ಅರ್ಚಕರು ಮತ್ತು ಸರ್ಕಾರದ ಪ್ರತಿನಿಧಿಗಳು ಈ ಮಾತುಕತೆಯಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಎನ್ ವಾಸು, ದೇವಸ್ಥಾನದ ಅರ್ಚಕರ ಜತೆ ಮಾತುಕತೆ ನಡೆಸಿ ದೇವಸ್ಥಾನದ ಬಾಗಿಲು ತೆರೆಯುವ ತೀರ್ಮಾನ ತೆಗೆದುಕೊಳ್ಳಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಇದೀಗ ಬಾಗಿಲು ತೆರೆಯುವುದಕ್ಕೆ ಅರ್ಚಕರು ವಿರೋಧ ವ್ಯಕ್ತಪಡಿಸಿದ್ದಾರೆ. . ಈ ಸಂಬಂಧ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಅವರು ಹೇಳಿದ್ದಾರೆ. ಶಬರಿಮಲೆಯಲ್ಲಿ ಪೂಜೆಗೆ ಸಂಬಂಧಿಸಿದಂತೆ  ದೇವಸ್ಥಾನದ ತಂತ್ರಿಗಳ ಮಾತೇ ಅಂತಿಮವಾಗಿದ್ದು, ಭಕ್ತರ ಪ್ರವೇಶವನ್ನು ತಾತ್ಕಾಲಿಕವಾಗಿ ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!