newsics.com
ಜಮ್ಮು: ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ಲೋಹಿಯಾ ಹತ್ಯೆ ಪ್ರಕರಣದ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ಜಮ್ಮುವಿನ ಮನೆಯಲ್ಲಿ ಪೊಲೀಸ್ ಮಹಾ ನಿರ್ದೇಶಕ ಶ್ರೇಣಿಯ ಹೇಮಂತ್ ಲೋಹಿಯಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಕುತ್ತಿಗೆ ಸೀಳಿ ಅಧಿಕಾರಿಯನ್ನು ಹತ್ಯೆ ಮಾಡಲಾಗಿತ್ತು.
ಇದೀಗ ರಾತ್ರಿಯಿಡಿ ನಡೆಸಿದ ಕಾರ್ಯಾಚರಣೆ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಮುಕೇಶ್ ಸಿಂಗ್ ತಿಳಿಸಿದ್ದಾರೆ.
ಶಂಕಿತ ಆರೋಪಿಯನ್ನು ಯಾಸಿರ್ ಅಹ್ಮದ್ ಎಂದು ಗುರುತಿಸಲಾಗಿದೆ. ಯಾಸಿರ್ ಅಡುಗೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎಂದು ವರದಿಯಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಹೇಮಂತ್ ಲೋಹಿಯಾ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.