Monday, October 3, 2022

ಖುಲಾಯಿಸಿದ ರೈತರ ಅದೃಷ್ಟ: 3.21 ಕ್ಯಾರೆಟ್ ವಜ್ರ ಪತ್ತೆ

Follow Us

newsics.com

ಪನ್ನಾ: ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ರೈತರಿಗೆ ಅದೃಷ್ಟ ಒಲಿದು ಬಂದಿದೆ.  ಬ್ರಿಜ್‌ಪುರ ಮೂಲದ ರೈತರಿಗೆ ಈ ಭಾಗ್ಯ ಲಕ್ಷ್ಮಿ ಒಲಿದಿದ್ದಾಳೆ.

ಸರ್ಕಾರದಿಂದ  ಲೀಸ್ ಮೇಲೆ ಪಡೆದ ಲಾಲ್ಕಿಧೇರಿ ಪ್ರದೇಶದ ವಜ್ರದ ಗಣಿಯಲ್ಲಿ 3.21 ಕ್ಯಾರೆಟ್ ವಜ್ರ ದೊರೆತಿದೆ.  ಇದೀಗ ವಜ್ರವನ್ನು ಪನ್ನಾದಲ್ಲಿರುವ ಸರ್ಕಾರಿ ಕಚೇರಿಯಲ್ಲಿ ಇರಿಸಲಾಗಿದೆ.  ಮುಂದಿನ ಕೆಲ ದಿನಗಳಲ್ಲಿ ಹರಾಜು ಪ್ರಕ್ರಿಯೆ ಆರಂಭವಾಗಲಿದೆ

ಈ ವಜ್ರದಿಂದ  ಬರುವ ಹಣವನ್ನು ಏಳು ಮಂದಿ ರೈತರು ಸಮಾನವಾಗಿ ಹಂಚಿಕೊಳ್ಳಲಿದ್ದೇವೆ ಎಂದು ರೈತ ರಾಜೇಂದ್ರ ಗುಪ್ತಾ ಹೇಳಿದ್ದಾರೆ.  ವಜ್ರ ಸಿಕ್ಕಿರುವುದು ನಮ್ಮ ಅದೃಷ್ಟ ಎಂದು  ಅವರು ಪ್ರತಿಕ್ರಿಯಿಸಿದ್ದಾರೆ.

ವಜ್ರವು ಉತ್ಕೃಷ್ಟ ದರ್ಜೆಯ ಶ್ರೇಣಿಗೆ  ಸೇರಿದೆ ಎಂದು  ಗುಣಮಟ್ಟದ ಪರೀಕ್ಷೆಯಲ್ಲಿ ಸಾಬೀತಾಗಿದೆ.

ಸರ್ಕಾರದ ನಿಯಮಗಳ ಪ್ರಕಾರ, ಸರ್ಕಾರೇತರ ಸಂಸ್ಥೆಗಳ ಒಡೆತನದ ಗಣಿಗಳಲ್ಲಿ ಅಥವಾ ಹೊಲಗಳಲ್ಲಿ ವಜ್ರಗಳು ಅಥವಾ ಇತರೆ ಬೆಲೆಬಾಳುವ ವಸ್ತುಗಳು ಸಿಕ್ಕರೆ ಮಾಲೀಕರು ಒಟ್ಟು ಹಣದ ಶೇ. 12.50 ರಷ್ಟು ಪಡೆಯಲು ಅರ್ಹರಾಗಿರುತ್ತಾರೆ

ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!