ಕೋಲ್ಕತಾ: ಪ್ರಧಾನಿ ಮೋದಿ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿಯಾಗಿ ಪರಸ್ಪರ ಮಾತುಕತೆ ನಡೆಸಿದರು.
ದೇಶಾದ್ಯಂತ ಪ್ರತಿಭಟನೆಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದರು. ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್ ಪಿಆರ್)ಯನ್ನು ಹಿಂಪಡೆಯುವಂತೆ ಒತ್ತಾಯಿಸಿರುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಈ ವಿಚಾರದ ಬಗ್ಗೆ ಚರ್ಚಿಸಲು ದೆಹಲಿಗೆ ಬರುವಂತೆ ಮೋದಿ ಹೇಳಿದ್ದಾರೆ ಎಂದು ರಾಜಭವನದಲ್ಲಿ ಶನಿವಾರ ಅವರನ್ನು ಭೇಟಿಯಾದ ಬಳಿಕ ಮಮತಾ ಬ್ಯಾನರ್ಜಿ ಸುದ್ದಿಗಾರರಿಗೆ ತಿಳಿಸಿದರು.
ಪ್ರಧಾನಿ ಜತೆಗಿನ ಭೇಟಿ ಔಪಚಾರಿಕ ಭೇಟಿ ಎಂದ ಮಮತಾ ಬ್ಯಾನರ್ಜಿ, ಕೇಂದ್ರದಿಂದ ಇನ್ನೂ 28 ಸಾವಿರ ಕೋಟಿ ರೂ. ಬಾಕಿ ಬರಬೇಕಾಗಿದೆ ಎಂದು ಪ್ರಧಾನಿಗೆ ತಿಳಿಸಿದ್ದಾಗಿ ಹೇಳಿದರು.
ಪ್ರತಿಭಟನೆಯ ಸ್ವಾಗತ:
ಇದಕ್ಕೂ ಮುನ್ನ ಪ್ರತಿಭಟನೆಯ ನಡುವೆಯೂ ಪ್ರಧಾನಿ ಮೋದಿ ಎನ್ ಎಸ್ ಸಿ ಬೋಸ್ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ರಾಜ್ಯಪಾಲ ಜಗದೀಪ್ ದಾನ್ಕರ್, ಮೇಯರ್ ಫಿರ್ಹಾದ್ ಹಕೀಂ, ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಬರಮಾಡಿಕೊಂಡರು. ಮಮತಾ ಬ್ಯಾನರ್ಜಿ ವಿಮಾನ ನಿಲ್ದಾಣದಲ್ಲಿ ಹಾಜರಿರಲಿಲ್ಲ.
ಮೋದಿ ಭೇಟಿಯಾದ ದೀದಿ
Follow Us