Wednesday, November 30, 2022

ಹಲ್ಲೆ ಖಂಡಿಸಿ ಜೂ.18ರಂದು ದೇಶಾದ್ಯಂತ ವೈದ್ಯರ ಪ್ರತಿಭಟನೆ

Follow Us

newsics.com

ನವದೆಹಲಿ: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜೂನ್ 18ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಭಾರತೀಯ ವೈದ್ಯಕೀಯ ಸಂಘ (ಐಎಂಎ) ನಿರ್ಧರಿಸಿದೆ.

‘ರಕ್ಷಕರನ್ನು ಉಳಿಸಿ’ ಎಂಬ ಘೋಷಣೆಯೊಂದಿಗೆ ವೈದ್ಯರು ಜೂನ್ 18 ರಂದು ದೇಶಾದ್ಯಂತದ ತನ್ನ ಎಲ್ಲಾ ರಾಜ್ಯ ಮತ್ತು ಸ್ಥಳೀಯ ಶಾಖೆಗಳಲ್ಲಿ ಕಪ್ಪು ಪಟ್ಟಿ, ಬ್ಯಾಡ್ಜ್ ಗಳನ್ನು ಧರಿಸಿ ಹಿಂಸಾಚಾರದ ವಿರುದ್ಧ ಜಾಗೃತಿ ಅಭಿಯಾನ ನಡೆಸುವ ಮೂಲಕ ಪ್ರತಿಭಟಿಸಲಾಗುವುದು ಎಂದು ಐಎಂಎ ತಿಳಿಸಿದೆ.

ಕರ್ನಾಟಕ, ಅಸ್ಸಾಂ, ಬಿಹಾರ, ಪಶ್ಚಿಮ ಬಂಗಾಳ, ದೆಹಲಿ, ಉತ್ತರ ಪ್ರದೇಶ ಮತ್ತಿತರ ರಾಜ್ಯಗಳಲ್ಲಿ ವೈದ್ಯರ ವಿರುದ್ಧ ನಡೆದ ಸರಣಿ ಹಲ್ಲೆಯನ್ನು ಖಂಡಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ.

ಆಸ್ಪತ್ರೆ ಮತ್ತು ಆರೋಗ್ಯ ರಕ್ಷಣಾ ವೃತ್ತಿಪರರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕು. ಪ್ರತಿ ಆಸ್ಪತ್ರೆಯಲ್ಲಿ ಭದ್ರತೆ ಹೆಚ್ಚಿಸುವುದು ಮತ್ತು ಆಸ್ಪತ್ರೆಗಳನ್ನು ಸಂರಕ್ಷಿತ ವಲಯಗಳೆಂದು ಘೋಷಿಸಬೇಕೆಂದು ಐಎಂಎ ಒತ್ತಾಯಿಸಿದೆ.

ಒಂದೇ ದಿನ 70421 ಮಂದಿಗೆ ಕೊರೋನಾ ಸೋಂಕು, 1,19, 501 ಗುಣಮುಖ, 3921 ಜನರ ಸಾವು

ಒಂದೇ ಕುಟುಂಬದ 11 ಜನರಿಗೆ ಕೊರೋನಾ ಸೋಂಕು, ಗ್ರಾಮಸ್ಥರಲ್ಲಿ ಆತಂಕ

ಚೇತರಿಕೆ ಕಾಣದ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ

ನೆತನ್ಯಾಹು ಆಡಳಿತ ಅಂತ್ಯ: ನಫ್ತಾಲಿ ಬೆನೆಟ್ ಇಸ್ರೇಲ್’ನ ಹೊಸ ಪ್ರಧಾನಿ

ಚೆಸ್ ನಲ್ಲಿ ವಿಶ್ವನಾಥ್ ಆನಂದ್ ಗೆ ಕಠಿಣ ಸ್ಪರ್ಧೆ ನೀಡಿದ ಕಿಚ್ಚ ಸುದೀಪ್

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!