ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳ ನೇಣು ಶಿಕ್ಷೆ ವಿಳಂಬವಾಗುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಆರು ತಿಂಗಳಲ್ಲಿ ನೇಣಿಗೇರಿಸುವ ವ್ಯವಸ್ಥೆ ಜಾರಿಗೊಳಿಸುವಂತೆ ವಿಡಿಯೋ ಸಂದೇಶದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಿರ್ಭಯ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವುದು ವಿಳಂಬ ಮಾಡಿದಷ್ಟು ದೇಶದ ಜನರ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ. ಇಂತಹ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮಾಡುತ್ತಿರುವುದು ಬೇಸರ ತಂದಿದೆ ಎಂದಿದ್ದಾರೆ.