newsics.com
ನವದೆಹಲಿ: ಅಂಡಮಾನ್- ನಿಕೋಬಾರ್ ದ್ವೀಪ ಸಮೂಹದಲ್ಲಿ ಇಂದು ಮುಂಜಾನೆ ಭೂಕಂಪನ ಸಂಭವಿಸಿದೆ. ಬೆಳಿಗ್ಗೆ 8.05 ನಿಮಿಷಕ್ಕೆ ಭೂಕಂಪನ ಸಂಭವಿಸಿದೆ ಎಂದು ಭೂಗರ್ಭ ಅಧ್ಯಯನ ಇಲಾಖೆ ಹೇಳಿದೆ.
ಪೋರ್ಟ್ ಬ್ಲೇರ್ ನಿಂದ 187 ಕಿಲೋ ಮೀಟರ್ ದೂರದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.3 ದಾಖಲಾಗಿದೆ.
ಭೂಕಂಪನದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ