Tuesday, April 13, 2021

ದೆಹಲಿಯಲ್ಲಿ ಒಂದೇ ದಿನ 2 ಬಾರಿ ಭೂಕಂಪನ!

ನವದೆಹಲಿ: ಸೋಮವಾರ ನಸುಕಿನಲ್ಲಷ್ಟೇ ಲಘು ಭೂಕಂಪ ಸಂಭವಿಸಿದ್ದ ದೆಹಲಿಯಲ್ಲಿ ಮಧ್ಯಾಹ್ನ ಮತ್ತೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಗರ್ಭ ಅಧ್ಯಯನ ಸಂಸ್ಥೆ ತಿಳಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ಪ್ರಮಾಣ 2.1 ರಷ್ಟು ದಾಖಲಾಗಿದೆ.
ರಾಷ್ಟ್ರ ರಾಜಧಾನಿಯಿಂದ 13 ಕಿಲೋಮೀಟರ್ ದೂರದ ಗುರಗಾಂವ ಗಡಿಯಲ್ಲಿ ಭೂಕಂಪದ ಕೇಂದ್ರಬಿಂದುವಿದ್ದು, ಏಪ್ರಿಲ್‌ನಿಂದ ಈವರೆಗೆ 14 ಭಾರಿ ದೆಹಲಿಯಲ್ಲಿ ದೆಹಲಿ-ಎನ್‍ಸಿಆರ್(ನ್ಯಾಷನಲ್ ಕ್ಯಾಪಿಟಲ್ ರೀಜನ್) ಪ್ರದೇಶಗಳಲ್ಲಿ ಒಟ್ಟು 14 ಲಘು ಮತ್ತು ಸಾಧಾರಣ ಭೂಕಂಪಗಳು ಸಂಭವಿಸಿವೆ.
ದೆಹಲಿಯಲ್ಲಿ ಕಳೆದ ಐದು ದಿನಗಳ ಹಿಂದಷ್ಟೇ 3.2 ತೀವ್ರತೆಯ ಭೂಕಂಪನ ಉಂಟಾಗಿದ್ದು, ಮೇ 29 ರಂದು 4.6 ತೀವ್ರತೆಯ ಭೂಕಂಪನ ಉಂಟಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!