ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿರುವವರಿಗೂ ಕೇರಳ ಮೂಲದ ಪಾಪ್ಯುಲರ್ ಫ್ರಂಟ್ ಸಂಘಟನೆಗೂ ನಂಟಿರುವುದು ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಬಹಿರಂಗಗೊಂಡಿದೆ.
ಪಿಎಫ್ ಐ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು, ಸಂಘಟನೆಯ ಖಾತೆಯಿಂದ ಪೂರ್ವ ಉತ್ತರಪ್ರದೇಶದಲ್ಲಿ ಸಿಎಎ ವಿರುದ್ಧದ ಪ್ರತಿಭಟನಾಕಾರರ ವಿರುದ್ಧ 120 ಕೋಟಿ ರೂ. ವರ್ಗಾವಣೆ ಮಾಡಿರುವುದನ್ನು ಪತ್ತೆ ಮಾಡಿದೆ.
ಸಿಎಎ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸಲು ಪಿಎಫ್ ಐ ಹಣದ ನೆರವು ನೀಡುತ್ತಿದೆ ಎನ್ನಲಾಗಿದೆ. ಇಡಿ ಈ ದಾಖಲೆಗಳನ್ನು ಗೃಹ ಸಚಿವಾಲಯದೊಂದಿಗೆ ವರ್ಗಾಯಿಸಿದೆ.
ಸಿಎಎ ವಿರುದ್ಧದ ಪ್ರತಿಭಟನಕಾರರಿಗೆ ಪಿಎಫ್ ಐ ನಂಟು!
Follow Us